ಬಿಎಸ್ ಪಿ ಮುಖ್ಯಸ್ಥನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಪೊಲೀಸ್ ಕಸ್ಟಡಿ; 15 ಮಂದಿ ಬಂಧನ
ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಮುಖ್ಯಸ್ಥ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಚೆನ್ನೈ ಪೊಲೀಸರು ಮಂಗಳವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಪೊನ್ನೈ ಬಾಲು, ರಾಮು ಮತ್ತು ಅರುಲ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಮೂರು ದಿನಗಳ ಕಸ್ಟಡಿಗೆ ಪಡೆದಿದ್ದಾರೆ. ನಾಲ್ಕನೇ ಆರೋಪಿ ಹರಿಹರನ್ ಗೆ ಐದು ದಿನಗಳ ಪೊಲೀಸ್ ಕಸ್ಟಡಿ ನೀಡಲಾಗಿದೆ.
ಎನ್ ಕೌಂಟರ್ ನಲ್ಲಿ ಕೊಲ್ಲಲ್ಪಡುವ ಭಯದಿಂದ ಪೊಲೀಸ್ ಕಸ್ಟಡಿಯಲ್ಲಿರಲು ಇಷ್ಟವಿಲ್ಲ ಎಂದು ಎಲ್ಲಾ ನಾಲ್ವರು ಆರೋಪಿಗಳು ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದರು.
ಅವರ ಮನವಿಯ ನಂತರ ಆರೋಪಿಗಳಿಗೆ ಪೊಲೀಸರು ಭರವಸೆ ನೀಡಿದರು.
ಕೆ.ಆರ್ಮ್ ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ ಈವರೆಗೆ 15 ಜನರನ್ನು ಬಂಧಿಸಲಾಗಿದೆ. ಕೆ.ಆರ್ಮ್ ಸ್ಟ್ರಾಂಗ್ ಅವರನ್ನು ಜುಲೈ 5 ರಂದು ಚೆನ್ನೈನ ಪೆರಂಬೂರ್ ನಲ್ಲಿರುವ ಅವರ ನಿವಾಸದ ಬಳಿ ಬೈಕ್ನಲ್ಲಿ ಬಂದ ಆರು ಜನರ ಗುಂಪು ಕೊಚ್ಚಿ ಕೊಲೆ ಮಾಡಿತ್ತು.
ಕಳೆದ ವರ್ಷ ಆಗಸ್ಟ್ ನಲ್ಲಿ ಕೊಲೆಯಾದ ಗ್ಯಾಂಗ್ ಸ್ಟಾರ್ ಆರ್ಕಾಟ್ ಸುರೇಶ್‌ನ ಸಹಚರರು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಚೆನ್ನೈ ಪೊಲೀಸರು ಶಂಕಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth