ಬೆಂಕಿ ಆರಿಸಲು ಹೋದ ಅರಣ್ಯ ಸಿಬ್ಬಂದಿಯ 3 ಬೈಕ್ ಗಳು ಸುಟ್ಟು ಭಸ್ಮ
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಕಾಡ್ಗಿಚ್ಚಿಗೆ ತತ್ತರಿಸಿದೆ. ಇತ್ತ ಬೆಂಕಿ ನಂದಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್ ಗೆ ಬೆಂಕಿ ಹತ್ತಿಕೊಂಡಿದ್ದು, 3 ಬೈಕ್ ಗಳು ಸುಟ್ಟು ಭಸ್ಮವಾಗಿದೆ.
ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಳಿಯಲ್ಲಿ ಬಂದ ಕಿಡಿಯಿಂದ ಬೈಕ್ ಗಳಿಗೆ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ.
ಬೆಂಕಿ ಆರಿಸಲು ಬಂದಿದ್ದ ಅರಣ್ಯ ಸಿಬ್ಬಂದಿ ಮೂರು ಬೈಕ್ ಗಳನ್ನು ನಿಲ್ಲಿಸಿ ಕಾರ್ಯಾಚರಣೆಗೆ ತೆರಳಿದ್ದರು. ಆದರೆ,ಇದೀಗ ಅವರ ಬೈಕ್ ಗಳಿಗೆ ಬೆಂಕಿ ಹತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw