ದುರ್ಗಾ ಪೂಜೆ ವೇಳೆ ಪೆಂಡಾಲ್ ಗೆ ಬೆಂಕಿ: ಮೂವರು ಮಕ್ಕಳು ಸಹಿತ ಐವರು ಸಾವು
ಲಕ್ನೋ: ದುರ್ಗಾ ಪೂಜೆ ವೇಳೆ ಆಕಸ್ಮಿಕವಾಗಿ ಪೆಂಡಾಲ್ ಗೆ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ಮೂವರು ಮಕ್ಕಳ ಸಹಿತ ಐವರು ಸಾವನ್ನಪ್ಪಿದ್ದು, 66ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಭದೋಹಿಯಲ್ಲಿ ಈ ಘಟನೆ ನಡೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದ್ದಾರೆ. ಹಲವು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. 33 ಜನರನ್ನು ವಾರಣಾಸಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ರಾತ್ರಿ 9:30ರ ವೇಳೆಗೆ ಈ ಭೀಕರ ಘಟನೆ ನಡೆದಿದ್ದು, ಆರತಿ ಮಾಡುವ ವೇಳೆ ಈ ದುರಂತ ನಡೆದಿದೆ ಎನ್ನಲಾಗುತ್ತಿದೆ. ಇನ್ನೂ ಪೊಲೀಸರು ಈ ಬಗ್ಗೆ ಪ್ರತಿಕ್ರಿಯಿಸುತ್ತಾ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka