ಛತ್ತೀಸ್ ಗಢದ ಕೊರ್ಬಾದಲ್ಲಿ ಅಗ್ನಿ ಅವಘಡ: 3 ಸಾವು, 10 ಮಂದಿಗೆ ಗಾಯ
ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಟ್ರಾನ್ಸ್ ಪೋರ್ಟ್ ನಗರ ಪ್ರದೇಶದಲ್ಲಿ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಮೊದಲ ಮಹಡಿಯಿಂದ ಜಿಗಿದ ಘಟನೆ ಕೂಡಾ ನಡೆಯಿತು.
ಈ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದವು. ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿದರು. ರಕ್ಷಣಾ ಕಾರ್ಯಾಚರಣೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡವು. ಈ ಘಟನೆಯಲ್ಲಿ ಸುಮಾರು 10 ಮಂದಿ ಗಾಯಗೊಂಡಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಂಕಿಯ ನಂತರ, ಕಪ್ಪು ಹೊಗೆಯು ಈ ಪ್ರದೇಶವನ್ನು ಆವರಿಸಿ ಜನಸಾಮಾನ್ಯರಲ್ಲಿ ಭೀತಿಯನ್ನು ಸೃಷ್ಟಿಸಿತು.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾನಿಯ ಪ್ರಮಾಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಏತನ್ಮಧ್ಯೆ ಭಾನುವಾರ ಕೂಡಾ ಪುಣೆಯ ಗಂಗಾಧಾಮ್ ಪ್ರದೇಶದ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಆವಾಗ ಸುಮಾರು 20-25 ಗೋದಾಮುಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw