ಉತ್ತರಾಖಂಡದಲ್ಲಿ ಭಾರೀ ಮಳೆ: ಕೇದಾರನಾಥ ಪಾದಯಾತ್ರೆ ಮಾರ್ಗದಲ್ಲಿ ಬಂಡೆಗಳು ಬಿದ್ದು ಮೂವರು ಸಾವು - Mahanayaka
10:42 PM Thursday 19 - September 2024

ಉತ್ತರಾಖಂಡದಲ್ಲಿ ಭಾರೀ ಮಳೆ: ಕೇದಾರನಾಥ ಪಾದಯಾತ್ರೆ ಮಾರ್ಗದಲ್ಲಿ ಬಂಡೆಗಳು ಬಿದ್ದು ಮೂವರು ಸಾವು

21/07/2024

ಉತ್ತರಾಖಂಡದ ಕೇದಾರನಾಥ ಪಾದಯಾತ್ರೆ ಮಾರ್ಗದಲ್ಲಿ ಬಂಡೆಗಳು ಉರುಳಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ. ಗೌರಿ ಕುಂಡ್ ಬಳಿ ಭಾನುವಾರ ಈ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ತಲುಪಿತ್ತು.
ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುಃಖ ವ್ಯಕ್ತಪಡಿಸಿದ್ದು, ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಕೇದಾರನಾಥ ಯಾತ್ರಾ ಮಾರ್ಗದ ಬಳಿ ಬೆಟ್ಟದಿಂದ ಬೀಳುವ ಅವಶೇಷಗಳು ಮತ್ತು ಭಾರೀ ಕಲ್ಲುಗಳಿಂದಾಗಿ ಕೆಲವು ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎಂಬ ಸುದ್ದಿ ತುಂಬಾ ದುಃಖಕರವಾಗಿದೆ. ಅಪಘಾತದ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ನಾನು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದು ಧಾಮಿ ಅವರ ಟ್ವೀಟ್ ಮಾಡಿದ್ದಾರೆ.

ಜುಲೈ 19 ರಂದು ತನಕ್ಪುರ್ ಚಂಪಾವತ್ ರಾಷ್ಟ್ರೀಯ ಹೆದ್ದಾರಿಯನ್ನು ಭೂಕುಸಿತದಿಂದ ಉಂಟಾದ ಅವಶೇಷಗಳಿಂದಾಗಿ ನಿರ್ಬಂಧಿಸಲಾಗಿತ್ತು.


Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ