ಕೆಲವೇ ಸೆಕೆಂಡ್ ಗಳಲ್ಲಿ 3 ಕೆ.ಜಿ. ತೂಕದ ಚಿನ್ನ ದೋಚಿದ ದರೋಡೆಕೋರರು!

ಬೆಂಗಳೂರು: ಕೆ.ಆರ್. ಮಾರ್ಕೆಟ್ ಫ್ಲೈಓವರ್ ನಲ್ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆ ಮಾಡಿ ಪರಾರಿಯಾದ ಘಟನೆ ಜರುಗಿದೆ.
ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್‌ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್ ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್ ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್ ಮೇಲೆ ಚಲಿಸುತಿದ್ದ ಬೈಕ್ ಗೆ ಅಡ್ಡ ಬಂದು ಬೈಕ್ ಸ್ಲೋ ಮಾಡಿಸಿದ್ದಾರೆ. ನಂತರ ನೇರವಾಗಿ ಸ್ಕೂಟರ್ ನಲ್ಲಿ ಚಿನ್ನ ಇದ್ದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಕೆಲವೇ ಸೆಕೆಂಡ್ ಗಳಲ್ಲಿ 3 ಕೆ.ಜಿ. 780 ಗ್ರಾಂ ತೂಕದ ಸುಮಾರು 1.70 ಕೋಟಿ ರೂ. ಮೌಲ್ಯದ ಚಿನ್ನವನ್ನು ದರೋಡೆಕೋರರು ದೋಚಿದ್ದಾರೆ.
ದರೋಡೆಗೊಳಗಾದ ವ್ಯಾಪಾರಿ ಕಾಟನ್‌ಪೇಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw