ದುರಂತ: ಜಾರ್ಖಂಡ್ ನಲ್ಲಿ ನದಿಗೆ ಉರುಳಿದ ಬಸ್: ಮೂವರು ಸಾವು
ಜಾರ್ಖಂಡ್ ನ ಗಿರಿದಿಹ್‌ನಲ್ಲಿ ಶನಿವಾರ ಪ್ರಯಾಣಿಕರನ್ನು ಹೊತ್ತ ಬಸ್ ನದಿಗೆ ಬಿದ್ದ ಘಟನೆ ನಡೆದಿದ್ದು, ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ನೀರಿನಲ್ಲಿ ಮುಳುಗಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೆಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳದಲ್ಲಿವೆ. ಜಾರ್ಖಂಡ್ ನ ಡುಮ್ರಿ ಗ್ರಾಮದಲ್ಲಿ ಬಸ್ ಬರಾಕರ್ ನದಿಗೆ ಬಿದ್ದಿದೆ. ಬಸ್ ರಾಂಚಿಯಿಂದ ಗಿರಿದಿಹ್ ಗೆ ತೆರಳುತ್ತಿತ್ತು. ಗಿರಿದಿಹ್-ಡುಮ್ರಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಸೇತುವೆಯ ಹಳಿಗಳನ್ನು ಮುರಿದು 50 ಅಡಿ ಆಳಕ್ಕೆ ನದಿಗೆ ಬಿದ್ದಿದೆ.
ಘಟನಾ ಸ್ಥಳಕ್ಕೆ ಶಾಸಕ ಸುದಿವ್ಯ ಕುಮಾರ್, ಜಿಲ್ಲಾಧಿಕಾರಿ ನಮನ್ ಪ್ರಿಯೇಶ್ ಲಕ್ರಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw