ಜಮ್ಮುವಿನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ: ಕ್ಷಣಾರ್ಧದಲ್ಲೇ ನಡೆಯಿತು ಅಟ್ಯಾಕ್

ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗಗ್ರಾನ್ ಪ್ರದೇಶದಲ್ಲಿ ಗುರುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ಮೂವರು ವಲಸೆ ಕಾರ್ಮಿಕರ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ.
ಈ ಘಟನೆಯಲ್ಲಿ ಕಾರ್ಮಿಕರು ಗಾಯಗೊಂಡಿದ್ದಾರೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಇದೊಂದು ಭಯೋತ್ಪಾದಕ ದಾಳಿಯಾಗಿದೆ. ಗಾಯಗೊಂಡ ಕಾರ್ಮಿಕರನ್ನು ಅನ್ವಾಲ್ ಥೋಕರ್, ಹೀರ್ಲಾಲ್ ಮತ್ತು ಪಾಂಟೂ ಎಂದು ಪೊಲೀಸರು ಗುರುತಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಶೋಪಿಯಾನ್ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದುವರೆಗೆ ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ದಾಳಿಕೋರರನ್ನು ವಶಪಡಿಸುವುದಕ್ಕಾಗಿ ಆ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw