ಭಾರತದಲ್ಲಿ 24 ಗಂಟೆಗಳಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಕೊವಿಡ್ ಗೆ ಬಲಿ - Mahanayaka

ಭಾರತದಲ್ಲಿ 24 ಗಂಟೆಗಳಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಕೊವಿಡ್ ಗೆ ಬಲಿ

covid ward
28/04/2021

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್ ಸೋಂಕಿಗೆ ದೊಡ್ಡ ಮಟ್ಟದ ಸಾವು ಸಂಭವಿಸಿದ್ದು, ಬರೋಬ್ಬರಿ 3,293 ಮಂದಿ ಅಸುನೀಗಿದ್ದಾರೆ. ಈವರೆಗೆ ಕೊವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಪೈಕಿ ಅತ್ಯಧಿಕ ಸಂಖ್ಯೆ ಇದಾಗಿದೆ ಎಂದು ತಿಳಿದು ಬಂದಿದೆ.

ಬುಧವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ಈ ವಿಚಾರ ತಿಳಿಸಲಾಗಿದೆ.  ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 3.6 ಲಕ್ಷ ನೂತನ ಕೊವಿಡ್ ಸೋಂಕು ಪ್ರಕರಣ ವರದಿಯಾಗಿದೆ.

ಭಾರತದಲ್ಲಿ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 1.79 ಕೋಟಿಗೆ ಏರಿಕೆಯಾಗಿದೆ. ಕಳೆದ ಏಳು ದಿನಗಳಿಂದ ಸತತವಾಗಿ ದಾಖಲೆಯ 3 ಲಕ್ಷ ಕ್ಕಿಂತಲೂ ಅಧಿಕ ಕೊವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ.  ಕೊವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 2,01,187ಗೆ ಏರಿಕೆಯಾಗಿದೆ.

ಇತ್ತೀಚಿನ ಸುದ್ದಿ