ಬುಡಕಟ್ಟು ಸಮುದಾಯದ 3 ಶಿಶುಗಳ ನಿಗೂಢ ಸಾವು!
ಕೇರಳ: ಇಲ್ಲಿನ ಅಟ್ಟಪಾಡಿ ತಾಲೂಕಿನಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಒಬ್ಬರ ಹಿಂದೊಬ್ಬರಂತೆ ಬುಡಕಟ್ಟು ಜನಾಂಗದ 3 ಶಿಶುಗಳು ಮರಣವಪ್ಪಿದ್ದು, ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ.
ಇತ್ತೀಚೆಗೆ ಮೂರು ತಿಂಗಳ ಶಿಶು ಮರಣವಪ್ಪಿದ ಬೆನ್ನಲ್ಲೇ ಈ ಹಿಂದಿನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಬುಡಕಟ್ಟು ಜನಾಂಗಗಳ ಮಕ್ಕಳ ಸಾವಿನ ಪ್ರಕರಣವನ್ನು ಕೇರಳ ಸರ್ಕಾರ ಇದೀಗ ಗಂಭೀರವಾಗಿ ಪರಿಗಣಿಸಿದ್ದು, ಆರೋಗ್ಯ ಸಚಿವೆ ವೀಣಾ ಜಾರ್ಜ್ ಖುದ್ದಾಗಿ ಈ ವಿಚಾರವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಇನ್ನೂ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೆ.ರಾಧಾಕೃಷ್ಣನ್ ಈ ಪ್ರದೇಶಕ್ಕೆ ಭೇಟಿ ನೀಡಿ, ಮಾಹಿತಿ ಪಡೆಯಲಿದ್ದು, ಪಾಲಕ್ಕಾಡ್ ಜಿಲ್ಲಾಧಿಕಾರಿ ರಮಾದೇವಿ ಈ ಬಗ್ಗೆ ಪ್ರತಿಕ್ರಿಯಿಸಿ, ಮನ್ನಾರ್ಕಾಡು ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ, ಇದು ಮೂರನೇ ಸಾವಾಗಿದ್ದು, ಪಾಲಕ್ಕಾಡ್ ಜಿಲ್ಲಾಸ್ಪತ್ರೆಯಲ್ಲಿಯೇ ಪೋಸ್ಟ್ ಮಾರ್ಟಮ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಪೇಜಾವರ ಶ್ರೀ ನಿರಾಕರಿಸಿದ್ದರು | ಜ್ಞಾನಪ್ರಕಾಶ ಸ್ವಾಮೀಜಿ
ಒಂದು ಸ್ಲೇಟ್ ನಲ್ಲಿ ಎಳೆನೀರು ರೇಟ್, ಇನ್ನೊಂದು ಸ್ಲೇಟ್ ನಲ್ಲಿ ‘ಬಡವ ರಾಸ್ಕಲ್’ ಡೇಟ್!
ಸರ್ಕಾರಿ ಲೈಬ್ರೆರಿಗಳಲ್ಲಿ ಅಂಬೇಡ್ಕರ್ ಪುಸ್ತಕಗಳ ಬಗ್ಗೆ ಯಾಕೆ ಈ ಅಸಡ್ಡೆ?
‘ಜೈಭೀಮ್’ ಸಿನಿಮಾ ಹೋಲುವ ಪ್ರಕರಣ | ತನ್ನ 3 ಮಕ್ಕಳ ಕೊಲೆಗೆ 19 ವರ್ಷಗಳ ಬಳಿಕ ನ್ಯಾಯ ಪಡೆದ ತಂದೆ!
ಬೆಂಗಳೂರಿನಲ್ಲಿ ಎರಡು ಬಾರಿ ಭೂಕಂಪನದ ಅನುಭವ: ಮಂಡ್ಯದಲ್ಲಿ ಕೇಳಿ ಬಂತು ನಿಗೂಢ ಶಬ್ಧ!