3 ವರ್ಷದ ಮಗುವನ್ನು ಕರಡಿ ಬೋನಿಗೆ ಎಸೆದ ತಾಯಿ: ಸಿಸಿ ಕ್ಯಾಮರದಲ್ಲಿ ಭಯಾನಕ ದೃಶ್ಯ ಸೆರೆ
ತಾಯಿಯೊಬ್ಬಳು ತನ್ನ 3 ವರ್ಷದ ಮಗುವನ್ನು ಕರಡಿ ಬೋನಿನೊಳಗೆ ಎಸೆದ ಘಟನೆ ಉಜ್ಜೈಕಿಸ್ತಾನದ ಮೃಗಾಲಯವೊಂದರಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸುತ್ತಲು ಜನರು ನೆರೆದಿರುವ ವೇಳೆಯಲ್ಲಿಯೇ ಮಹಿಳೆ ತನ್ನ ಮಗುವನ್ನು ಎಲ್ಲರ ಎದುರೇ ಬೋನಿನೊಳಗೆ ಎಸೆದಿದ್ದಾಳೆ. ಈ ವೇಳೆ ಸ್ಥಳೀಯರು ತಡೆಯಲು ಯತ್ನಿಸಿದರೂ 16 ಅಡಿ ಆಳದಲ್ಲಿರುವ ಕರಡಿ ಬೋನಿನೊಳಗೆ ಮಗುವನ್ನು ಎಸೆದಿದ್ದಾಳೆ.
ಮಗುವನ್ನು ಎಸೆಯುತ್ತಿದ್ದಂತೆಯೇ ಕರಡಿ ಮಗುವಿನ ಬಳಿಗೆ ಓಡಿ ಹೋಗಿದೆ. ಅಷ್ಟರಲ್ಲಿ ಮೃಗಾಲಯದ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು, ಓಡಿ ಹೋಗಿ ಕರಡಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆದರೆ 16 ಅಡಿ ಎತ್ತರದಿಂದ ಬಿದ್ದ ಪರಿಣಾಮ ಮಗುವಿಗೆ ತೀವ್ರವಾಗಿ ಗಾಯಗಳಾಗಿವೆ ಎಂದು ಹೇಳಲಾಗಿದೆ. ಸದ್ಯ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಮಗುವಿನ ತಾಯಿಯನ್ನು ಬಂಧಿಸಲಾಗಿದ್ದು, ಪ್ರಕರಣ ಸಾಬೀತಾದರೆ ಆಕೆಗೆ 15 ವರ್ಷ ಜೈಲು ಶಿಕ್ಷೆಯಾಗಲಿದೆ. ವರದಿಯ ಪ್ರಕಾರ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ. ಪತಿಯಿಂದ ದೂರವಾದ ಬಳಿಕ ರಷ್ಯಾದಲ್ಲಿ ವಾಸವಿದ್ದಳು. ಆ ಬಳಿಕ ಆಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ
ಪ್ರತಿ ಮದುವೆ ಹಿಂಸೆ, ಪ್ರತಿ ಪುರುಷ ಅತ್ಯಾಚಾರಿ ಎನ್ನಲು ಸಾಧ್ಯವಿಲ್ಲ | ಸ್ಮೃತಿ ಇರಾನಿ
ಚಿಕನ್ ಫಾಕ್ಸ್: ಒಂದೇ ಕುಟುಂಬದ ಇಬ್ಬರು ಬಾಲಕರ ಸಾವು
ಗಾಂಜಾ ಬೆಳೆದು ಬೆಂಗಳೂರಿನಲ್ಲಿ ಮಾರಾಟ: ಇಬ್ಬರು ಆರೋಪಿಗಳ ಸೆರೆ
ಬಿಜೆಪಿ ಕಚೇರಿಯಲ್ಲೇ ಬಡಿದಾಡಿಕೊಂಡು ಕಾರ್ಯಕರ್ತರು: ಮಾಜಿ ಶಾಸಕ ಸುರೇಶ್ ಗೌಡರ ಬೆಂಬಲಿಗನ ವಿರುದ್ಧ ದೂರು