ಮಧ್ಯಾಹ್ನದ ಊಟದ ನಂತರ ಅಸ್ವಸ್ಥರಾದ 35 ಸೈನಿಕರು!
ಹಾಸನ: ಮಧ್ಯಾಹ್ನದ ಊಟದ ನಂತರ ಸುಮಾರು 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.
ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿದ್ದು, ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw