ದೆಹಲಿಯಲ್ಲಿ 4 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆ ಸೇರಿದ್ದಾರೆ: ಅರವಿಂದ್ ಕೇಜ್ರಿವಾಲ್ - Mahanayaka
6:16 PM Wednesday 11 - December 2024

ದೆಹಲಿಯಲ್ಲಿ 4 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆ ತೊರೆದು ಸರ್ಕಾರಿ ಶಾಲೆ ಸೇರಿದ್ದಾರೆ: ಅರವಿಂದ್ ಕೇಜ್ರಿವಾಲ್

kejriwal
21/04/2022

ಬೆಂಗಳೂರು:  ದೆಹಲಿಯಲ್ಲಿ ಖಾಸಗಿ ಶಾಲೆಗಳನ್ನು ತೊರೆದು 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ದೆಹಲಿ ಸಿಎಂ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್‌ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳನ್ನು ಬದಲಾಯಿಸಿದ್ದೇವೆ. ಈ ವರ್ಷ ನಾಲ್ಕು ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆಗಳನ್ನು ತೊರೆದು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. ದೆಹಲಿಯಲ್ಲಿ ಆಸ್ಪತ್ರೆಗಳ ಪರಿಸ್ಥಿತಿಯೂ ಹದಗೆಟ್ಟಿತ್ತು. ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ದೆಹಲಿಯ 2 ಕೋಟಿ ಜನರಿಗೆ, ಎಲ್ಲ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ದೆಹಲಿಯಲ್ಲಿ ಈಗ 24 ಗಂಟೆಗಳ ಕಾಲವೂ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಆಮ್ ಆದ್ಮಿ ಆಡಳಿತದ ಬಳಿಕ ದೆಹಲಿಯಲ್ಲಾದ ಬದಲಾವಣೆಗಳ ಬಗ್ಗೆ ಅರವಿಂದ್ ಕೇಜ್ರಿವಾಲ್ ವಿವರಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

2022-23ರ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ: ಯಾವಾಗ ಶಾಲೆ ಆರಂಭ?

ನನ್ನನ್ನು ಜೈಲಿಗೆ ಕಳಿಸಬೇಕು ಅನ್ಕೊಂಡಿದ್ರು; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ರಾತ್ರಿಯಾದರೆ ಇಲ್ಲಿ ನೀರಿನಿಂದ ಮೇಲಕ್ಕೆ ಬರುತ್ತವೆ ರಾಶಿ ರಾಶಿ ಮೀನುಗಳು: ಏನಿದರ ರಹಸ್ಯ?

ಆಟವಾಡುತ್ತಿದ್ದ ಬಾಲಕನಿಗೆ ಟಿಪ್ಪರ್ ಡಿಕ್ಕಿ: ಬಾಲಕನ ದಾರುಣ ಸಾವು

ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕ ಜಿಗ್ನೇಶ್ ಮೇವಾನಿ ಅರೆಸ್ಟ್!

ಇತ್ತೀಚಿನ ಸುದ್ದಿ