ನಾಲ್ಕು ಪ್ರಕರಣಗಳ ಆರೋಪಿಯನ್ನು ನಡು ರಸ್ತೆಯಲ್ಲೇ ಭೀಕರವಾಗಿ ಹತ್ಯೆ ನಡೆಸಿದ ದುಷ್ಕರ್ಮಿಗಳು - Mahanayaka
5:55 AM Thursday 12 - December 2024

ನಾಲ್ಕು ಪ್ರಕರಣಗಳ ಆರೋಪಿಯನ್ನು ನಡು ರಸ್ತೆಯಲ್ಲೇ ಭೀಕರವಾಗಿ ಹತ್ಯೆ ನಡೆಸಿದ ದುಷ್ಕರ್ಮಿಗಳು

bangalore crime news
28/07/2021

ಬೆಂಗಳೂರು:  ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು  ಬೆಂಗಳೂರಿನ ಬಾಣಸವಾಡಿಯಲ್ಲಿ ಇಂದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ  ನಡೆದಿದ್ದು, ಚಾಕುವಿನಿಂದ ಚುಚ್ಚಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ನಾಲ್ಕು ಪ್ರಕರಣಗಳಲ್ಲಿ ಆರೋಪಿಯಾಗಿರುವ ಹರೀಶ್ ಎಂಬಾತ ಹತ್ಯೆಗೀಡಾಗಿರುವ ವ್ಯಕ್ತಿಯಾಗಿದ್ದಾನೆ. ಈತ ಬಾಣಸವಾಡಿ ಬಿಟ್ಟು ಬಸವೇಶ್ವರ ನಗರದಲ್ಲಿ ವಾಸಿಸುತ್ತಿದ್ದ ಎಂದು ಹೇಳಲಾಗಿದೆ. ಆದರೆ ಆತನ ಮೇಲೆ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಇಂದು  ಬಾಣಸವಾಡಿ ಪೊಲೀಸ್ ಠಾಣೆಗೆ ಪೊಲೀಸರು ಕರೆಸಿದ್ದು, ಸಿಆರ್ ಪಿಸಿ 110 ಕೇಸ್ ದಾಖಲಿಸಿ, ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗಬಾರದು ಎಂದು ಎಚ್ಚರಿಸಿದ್ದರು.

ಇದಾದ ಬಳಿಕ ಪೊಲೀಸ್ ಠಾಣೆಗೆ ಆತನ ಫೋಟೋವನ್ನು ನೀಡಬೇಕಿತ್ತು. ಹಾಗಾಗಿ ನಾನು ಹೊರಗಡೆ ಹೋಗಿ ಊಟ ಮಾಡಿಕೊಂಡು ಬರುವಾಗ ಫೋಟೋ ಕೊಡುತ್ತೇನೆ ಎಂದು ಠಾಣೆಯಿಂದ ಹೊರ ಬಂದಿದ್ದ ಎಂದು ಹೇಳಲಾಗಿದೆ. ಅಲ್ಲಿಂದ ಬೈಕ್ ನಲ್ಲಿ ಹೊರಟಿದ್ದ ಹರೀಶ್ ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿದ್ದು, ಚಾಕುವಿನಿಂದ ಚುಚ್ಚಿ, ತಲೆಗೆ ಕಲ್ಲು ಎತ್ತಿ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಇದೀಗ ಹರೀಶ್ ನ ಹತ್ಯೆ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸುದ್ದಿಗಳು…

ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೇಲೆ ಕಾರಿನಲ್ಲೇ ಅತ್ಯಾಚಾರ | ಬಾಡಿಗೆ ಮನೆ ಮಾಲಿಕನಿಂದ ಕೃತ್ಯ

ಏರ್ಟೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ನಾಳೆಯಿಂದ ಹೊಸ ಬದಲಾವಣೆ

ಯಡಿಯೂರಪ್ಪಗೆ ವಯಸ್ಸಾಗಿಲ್ಲ, ಮದುವೆ ಮಾಡಿಸಿದ್ರೆ ಮಕ್ಕಳಾಗ್ತವೆ | ಸಿ.ಎಂ.ಇಬ್ರಾಹಿಂ

ಪತ್ನಿಯ ಜೊತೆಗೆ ದೈಹಿಕ ಸಂಬಂಧ ಹೊಂದಿದ್ದ ಯುವಕನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಪತಿ!

ಇತ್ತೀಚಿನ ಸುದ್ದಿ