4 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಜೇಮ್ಸ್!
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಬಿಡುಗಡೆಗೆ ಸಿದ್ಧವಾಗಿದ್ದು, ಮಾರ್ಚ್ 17ರಂದು ದೇಶಾದ್ಯಂತ 4 ಸಾವಿರಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆ.
ಕನ್ನಡ ಸೇರಿದಂತೆ ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಪುನೀತ್ ನಟನೆಯ ಜೇಮ್ಸ್ ಬಿಡುಗಡೆಯಾಗಲಿದೆ. ಕರ್ನಾಟಕದ 400ಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ಪುನೀತ್ ನಟನೆಯ ಜೇಮ್ಸ್ ಬಿಡುಗಡೆಯಾಗಲಿದೆ.
ಚಿತ್ರದ ಡಬ್ಬಿಂಗ್ ಪೂರ್ಣಗೊಳ್ಳುವ ಮುನ್ನವೇ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿದ್ದು, ಹೀಗಾಗಿ ಚಿತ್ರಕ್ಕೆ ಪುನೀತ್ ರಾಜ್ ಕುಮಾರ್ ಸಹೋದರ ನಟ ಶಿವರಾಜ್ ಕುಮಾರ್ ಅವರು ಧ್ವನಿ ನೀಡಿದ್ದಾರೆ.
ಮಾಫಿಯಾ ಕಥೆಯನ್ನು ಚಿತ್ರವು ಹೊಂದಿದೆ. ಜೆ-ವಿಂಗ್ ಎಂಬ ಸೆಕ್ಯುರಿಟಿ ಏಜೆನ್ಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾತ್ರದಲ್ಲಿ ಪವರ್‌ಸ್ಟಾರ್ ಪುನೀತ್ ಅವರು ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಬಿಡುಗಡೆಗೂ ಮೊದಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾದುಕುಳಿತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ಗೆ ಮತ್ತೊಂದು ಆಘಾತ
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಸಚಿವ ಆನಂದ್ ಸಿಂಗ್, ಜನಾರ್ದನ ರೆಡ್ಡಿಗೆ ಜಾಮೀನು
ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ದೇವಸ್ಥಾನದ ಆವರಣದಲ್ಲಿಯೇ ತಲೆಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ
ಕಬ್ಬಿಣ ಅದಿರು ಅಕ್ರಮ ಸಾಗಾಟ: 8 ಮಂದಿ ಆರೋಪಿಗಳ ಬಂಧನ