403 ಕ್ಷೇತ್ರಗಳಲ್ಲಿಯೂ ASP ಸ್ಪರ್ಧೆ | ಮಾಯಾವತಿಗೆ ಅಸುರಕ್ಷಿತ ಭಾವನೆ ಇದೆ- ಚಂದ್ರಶೇಖರ್ ಆಜಾದ್
ಲಕ್ನೋ: ಉತ್ತರಪ್ರದೇಶ ಚುನಾವಣೆಯಲ್ಲಿ ಆಜಾದ್ ಸಮಾಜ್ ಪಾರ್ಟಿಯು 403 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ದಲಿತ ನಾಯಕ, ಭೀಮ್ ಆರ್ಮಿಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಹೇಳಿದ್ದು, ಇತರ ಪಕ್ಷಗಳು ಬಯಸಿದರೆ ಮೈತ್ರಿಗೆ ಕೂಡ ಸಿದ್ಧ ಎಂದು ಅವರು ಹೇಳಿದ್ದಾರೆ.
ಶುಕ್ರವಾರ ಪಂಚಾಯತ್ ಆಜ್ ತಕ್ ನಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ 403 ಸ್ಥಾನಗಳಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದರು. ಬಿಜೆಪಿ ಆಡಳಿತದ ಕಳೆದ 4.5 ವರ್ಷಗಳಲ್ಲಿ ರಾಜ್ಯ ಮತ್ತು ರಾಜ್ಯದಲ್ಲಿರುವ ದಲಿತ ಸಮುದಾಯದ ಜನರು ಏನು ಅನುಭವಿಸಿದ್ದಾರೆ ಎಂಬುದನ್ನು ಎಲ್ಲರೂ ನೋಡಿದ್ದಾರೆ. ದಲಿತರು ಈಗ ತಮ್ಮ ಹಕ್ಕುಗಳನ್ನು ಮರಳಿ ಪಡೆಯಲು ಬಯಸುತ್ತಾರೆ ಎಂದು ಚಂದ್ರಶೇಖರ್ ಇದೇ ಸಂದರ್ಭದಲ್ಲಿ ಹೇಳಿದರು.
ನಾವು ದಲಿತ ಜನರ ಹಕ್ಕುಗಳಿಗಾಗಿ ಹೋರಾಡಲು ಶ್ರಮಿಸುತ್ತಿದ್ದೇವೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ದಲಿತರನ್ನು ಮತ್ತೆ ಅಧಿಕಾರಕ್ಕೆ ತರುವುದು ಮತ್ತು ಬಡವರು, ದಲಿತರ ಹಕ್ಕುಗಳಿಗಾಗಿ ಹೋರಾಡುವುದು ನಮ್ಮ ಗುರಿಯಾಗಿದೆ ಎಂದು ಅವರು ಇದೇ ಸಂದರ್ಭದಲ್ಲ ತಿಳಿಸಿದರು.
ಬಿಸ್ ಪಿ ವರಿಷ್ಠೆ ಮಾಯಾವತಿ ನನ್ನೊಂದಿಗೆ ಮಾತನಾಡುತ್ತಿಲ್ಲ ಮತ್ತು ಮಾಯಾವತಿಗೆ ಅಸುರಕ್ಷಿತ ಮನೋಭಾವ ಇದೆ ಎಂದು ಹೇಳಿಕೊಂಡಿದ್ದಾರೆ. ನಾನು ಪ್ರಯತ್ನಿಸಿದೆ ಆದರೆ ಮಾಯಾವತಿ ನನ್ನೊಂದಿಗೆ ಮಾತನಾಡುವುದಿಲ್ಲ. ಅವರಲ್ಲಿ ಕೆಲವು ಅಭದ್ರತೆ ಮನೋಭಾವನೆ ಇದೆ. ನಾನು ಅವರನ್ನು ಗೌರವಿಸುತ್ತೇನೆ ಮತ್ತು ಅವರೆ ವಿರುದ್ಧ ಏನನ್ನೂ ಹೇಳಿಲ್ಲ, ಆದರೆ ಅವರು ಮಾತ್ರ ನನ್ನನ್ನು ಆರೆಸ್ಸೆಸ್, ಬಿಜೆಪಿ ಮತ್ತು ಕಾಂಗ್ರೆಸ್‌ನ ಏಜೆಂಟ್ ಎಂದು ಕರೆಯುತ್ತಿದ್ದರು. ಆದರೆ ನಾನು ಮಾಯಾವತಿಯನ್ನು ಯಾರೊಬ್ಬರ ಏಜೆಂಟ್ ಎಂದು ಕರೆಯಲಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಇನ್ನಷ್ಟು ಸುದ್ದಿಗಳು…
ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಅನಾಥನಾಗಿದ್ದ | ಬಿಜೆಪಿ ಸೇರ್ಪಡೆಗೆ ಎನ್.ಮಹೇಶ್ ಪ್ರತಿಕ್ರಿಯೆ
ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ | ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ
ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿಯಿಂದ ವಿಡಿಯೋ ಕಾಲ್ | ಕಣ್ಣೀರು ಹಾಕಿದ ಆಟಗಾರ್ತಿಯರು
“ಕೋತಿ ತಾನು ಕೆಡುವುದಲ್ಲದೇ ವನವನ್ನೆಲ್ಲ ಕೆಡಿಸ್ತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಎಸ್ ಡಿಪಿಐ ಆಕ್ರೋಶ