ಇಂದು 5 ಗಂಟೆಯವರೆಗೆ 5 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸ್ಥಗಿತ!
04/02/2021
ಚಂಡೀಗಢ: ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹರ್ಯಾಣ ಸರ್ಕಾರವು 5 ಜಿಲ್ಲೆಗಳ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಆದೇಶಿಸಿದ್ದು, ಇಂದು 5 ಗಂಟೆಯವರೆಗೂ ಇಂಟರ್ ನೆಟ್ ಕಡಿತ ಆದೇಶವನ್ನು ವಿಸ್ತರಿಸಲಾಗಿದೆ.
ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಹರ್ಯಾಣದ ಕೈಥಲ್, ಜಿಂದ್, ರೋಹ್ಟಕ್, ಸೋನಿಪತ್ ಮತ್ತು ಝಜ್ಜರ್ ಜಿಲ್ಲೆಗಳಲ್ಲಿ ದೂರವಾಣಿ ಕರೆಗಳನ್ನು ಹೊರತು ಪಡಿಸಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಜನವರಿ 26ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿತ್ತು. ಗಡಿಭಾಗದಲ್ಲಿ ಪ್ರತಿಭಟನಾಕಾರರ ವಿರುದ್ಧ ಸ್ಥಳೀಯರನ್ನು ಎತ್ತಿಕಟ್ಟಿರುವ ಕಾರಣ ಘರ್ಷಣೆ ಕೂಡ ಉಂಟಾಗಿತ್ತು. ಇದೀಗ ಪ್ರತಿಭಟನಾಕಾರರ ವಿರುದ್ಧ ಇಂಟರ್ ನೆಟ್ ಸ್ಥಗಿತದ ಬಾಣ ಬಿಡಲಾಗಿದೆ. ಆದರೆ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.