80 ಕೋಟಿ ಜನರಿಗೆ 5 ಕೆ.ಜಿ. ಉಚಿತ ಆಹಾರ ಧಾನ್ಯ: ಕೇಂದ್ರ ಸರ್ಕಾರದಿಂದ ಘೋಷಣೆ
23/04/2021
ನವದೆಹಲಿ: ಕೊರೊನಾ ನಡುವೆ 80 ಕೋಟಿ ಫಲಾನುಭವಿಗಳಿಗೆ ಉಚಿತ 5 ಕೆ.ಜಿ. ಆಹಾರ ಧಾನ್ಯ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ ತಿಂಗಳಿಂದ ಜೂನ್ 2021ರವರೆಗೆ 80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ಈ ಯೋಜನೆಗೋಸ್ಕರ ಭಾರತ ಸರ್ಕಾರ 26,000 ಕೋಟಿ ರೂ.ಗಿಂತಲೂ ಅಧಿಕ ಹಣ ಖರ್ಚು ಮಾಡುತ್ತಿದೆ ಎಂದು ಹೇಳಲಾಗಿದೆ. ಈ ಯೋಜನೆ ಎಷ್ಟರ ಮಟ್ಟಿಗೆ ಜಾರಿಯಾಗುತ್ತದೆ ಎಂದು ಕಾದುನೋಡಬೇಕಿದೆ.