ಭೀಕರ ಬಸ್ ಅಪಘಾತ: 5 ಮಂದಿ ಸಾವು, 17 ಮಂದಿಗೆ ಗಾಯ

ಉತ್ತರಾಖಂಡದ ಪೌರಿ ಜಿಲ್ಲೆಯ ದಹಲ್ಚೋರಿ ಪ್ರದೇಶದ ಬಳಿ ಬಸ್ ನಿಯಂತ್ರಣ ತಪ್ಪಿ 100 ಮೀಟರ್ ಆಳದ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 17 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಪೌರಿ ಗರ್ವಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಚೌಹಾಣ್ ಅವರು, ಐದು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಬಸ್ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಸುಮಾರು 10 ಮಂದಿಯನ್ನು ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೌರಿ ಜಿಲ್ಲೆಯಲ್ಲಿ 7 ರಿಂದ 8 ರೋಗಿಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ” ಎಂದು ಚೌಹಾಣ್ ಎಎನ್ಐಗೆ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj