ದಕ್ಷಿಣ ಕನ್ನಡ: ಮಳೆ ಪರಿಣಾಮ ಸಾವಿಗೀಡಾದವರ ಕುಟುಂಬಗಳಿಗೆ 5 ಲಕ್ಷ ಪರಿಹಾರ - Mahanayaka
7:55 PM Saturday 14 - December 2024

ದಕ್ಷಿಣ ಕನ್ನಡ: ಮಳೆ ಪರಿಣಾಮ ಸಾವಿಗೀಡಾದವರ ಕುಟುಂಬಗಳಿಗೆ 5 ಲಕ್ಷ ಪರಿಹಾರ

05/07/2023

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್‌ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್‌ ದೀಪದ ತಂತಿ ತಗುಲಿ ಮರಣ ಹೊಂದಿರುತ್ತಾರೆ.ಈ ಬಗ್ಗೆ ಮಂಗಳೂರು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ.

ಮೃತರ ವಾರಸುದಾರರಿಗೆ ಮೆಸ್ಕಾಂ ಇಲಾಖಾ ವತಿಯಿಂದ 5 ಲಕ್ಷ ರೂ.ಗಳ ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೊಂದು ಘಟನೆಯಲ್ಲಿ ಮಳೆ ನೀರು ತುಂಬಿ ಹರಿಯುತ್ತಿದ್ದ ತನ್ನ ಮನೆ ಸಂಪರ್ಕದ ಮೋರಿಯನ್ನು ದಾಟುವ ವೇಳೆ ಆಯತಪ್ಪಿ ಮೋರಿಯೊಳಗೆ ಬಿದ್ದು ಮೃತಪಟ್ಟಿದ್ದ ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಸುರೇಶ್ ಗಟ್ಟಿ (53 ವರ್ಷ)  ಅವರ ಕುಟುಂಬಕ್ಕೆ ಜಿಲ್ಲಾಡಳಿತದ ವತಿಯಿಂದ ಜು.5ರ ಬುಧವಾರ 5 ಲಕ್ಷ ರೂ.ಗಳ ಪರಿಹಾರ ಪಾವತಿಸಲಾಗಿದೆ.

ಜು.4 ರಂದು ಸಂಜೆ ಸುಮಾರು 7.30ಕ್ಕೆ ಮಳೆ ನೀರು ತುಂಬಿ ಹರಿಯುತ್ತಿದ್ದ ತನ್ನ ಮನೆ ಸಂಪರ್ಕದ ಮೋರಿಯನ್ನು ದಾಟುವ ವೇಳೆ ಆಯತಪ್ಪಿ ಮೋರಿಯೊಳಗೆ ಬಿದ್ದು ಅವರು ಮೃತಪಟ್ಟಿದ್ದರು. ಈ ಬಗ್ಗೆ  ಉಳ್ಳಾಲ ತಾಲೂಕು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ.

ಮೃತರ ವಾರಸುದಾರರಿಗೆ ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಪರಿಹಾರ ವಿತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ:

ಮಂಗಳೂರು: ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡಿದ್ದರು.

ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ ಗಳು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw


ವಿಡಿಯೋ ನೋಡಿ:

ಇತ್ತೀಚಿನ ಸುದ್ದಿ