ಬೀದಿ ನಾಯಿ ದಾಳಿಯಿಂದ ಗಾಯಗೊಂಡರೆ, 5 ಸಾವಿರ, ಪ್ರಾಣ ಕಳೆದುಕೊಂಡರೆ 5 ಲಕ್ಷ ರೂ. ಪರಿಹಾರ - Mahanayaka

ಬೀದಿ ನಾಯಿ ದಾಳಿಯಿಂದ ಗಾಯಗೊಂಡರೆ, 5 ಸಾವಿರ, ಪ್ರಾಣ ಕಳೆದುಕೊಂಡರೆ 5 ಲಕ್ಷ ರೂ. ಪರಿಹಾರ

street dog
16/11/2023

ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಲಕ್ಷ ಪರಿಹಾರದ ಬಗ್ಗೆ ಚಿಂತನೆ ನಡೆಸಿರುವುದಾಗಿ ರಾಜ್ಯ ಉಚ್ಚನ್ಯಾಯಾಲಯ ಹೇಳಿದೆ‌.

ತುಮಕೂರಿ ವಕೀಲ ರಮೇಶ್ ಎಂಬುವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲರು, ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅಕ್ಟೋಬರ್‌ 6ರಂದು ಸಭೆಯಲ್ಲಿ ನಡೆಸಲಾಗಿದೆ. ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಲಕ್ಷ ಪರಿಹಾರ ನೀಡಲು ಸಭೆಯಲ್ಲಿ ಚರ್ಚಿಸಲಾಗಿದೆ. ಎರಡನೇ ಸಭೆ ನಡೆಸಲು ಉದ್ದೇಶಿಸಲಾಗಿದೆ. ಅದಕ್ಕೆ ಕಾವಲಾವಕಾಶ ನೀಡಬೇಕು ಎಂದು ಕೋರಿ ಅಫಿಡವಿಟ್‌ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ