150 ಅಡಿ ಆಳದ ಕೊಳವೆಬಾವಿಯಲ್ಲಿ ಬಿದ್ದ 5 ವರ್ಷದ ಬಾಲಕ: ಫಲ ನೀಡದ 55 ಗಂಟೆಗಳ ಕಾರ್ಯಾಚರಣೆ
ರಾಜಸ್ಥಾನದಲ್ಲಿ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ರಾಜಸ್ಥಾನದ 5 ವರ್ಷದ ಬಾಲಕನನ್ನು 55 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಮೇಲಕ್ಕೆತ್ತಿದರೂ ಆತ ಸಾವನ್ನಪ್ಪಿದ ಘಟನೆ ನಡೆದಿದೆ.
ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಲಿಖಡ್ ಗ್ರಾಮದ ಹೊಲದಲ್ಲಿ ಆಟವಾಡುತ್ತಿದ್ದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿತ್ತು. ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಯಿತು. ಮಗುವನ್ನು ತಲುಪಲು ಡ್ರಿಲ್ಲಿಂಗ್ ಯಂತ್ರಗಳನ್ನು ಬಳಸಿಕೊಂಡು ಸಮಾನಾಂತರ ಗುಂಡಿಯನ್ನು ಅಗೆಯಲಾಯಿತು.
ರಕ್ಷಣಾ ಪ್ರಯತ್ನಗಳ ಬಗ್ಗೆ ವಿವರಿಸಿದ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಸಿಬ್ಬಂದಿ, ಕಾರ್ಯಾಚರಣೆಯಲ್ಲಿ ಸುಮಾರು 160 ಅಡಿ ನೀರಿನ ಮಟ್ಟ ಸೇರಿದಂತೆ ಅಸಂಖ್ಯಾತ ಸವಾಲುಗಳಿವೆ ಎಂದು ಹೇಳಿತ್ತು.
ಬಾಲಕನ ಚಲನವಲನಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುವಲ್ಲಿನ ತೊಂದರೆ ಮತ್ತು ರಕ್ಷಣಾ ಸಿಬ್ಬಂದಿಗೆ ಸುರಕ್ಷತೆಯ ಕಾಳಜಿಗಳು ಸಹ ಕಾರ್ಯಾಚರಣೆಯ ಸವಾಲುಗಳಲ್ಲಿ ಸೇರಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರ್ಷದ ಸೆಪ್ಟೆಂಬರ್ನಲ್ಲಿ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ 18 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ದೌಸಾದ ಬಂಡಿಕುಯಿ ಪ್ರದೇಶದಲ್ಲಿ 35 ಅಡಿ ತೆರೆದ ಕೊಳವೆಬಾವಿಯಿಂದ ಎರಡು ವರ್ಷದ ಬಾಲಕಿಯನ್ನು ರಕ್ಷಿಸಲಾಗಿತ್ತು. ಬಾಲಕಿ 28 ಅಡಿ ಆಳದಲ್ಲಿ ಸಿಕ್ಕಿಬಿದ್ದಿದ್ದಳು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj