ಅಮಾನುಷ: ಅತ್ಯಾಚಾರ ಮಾಡಿ ಬಾಲಕಿಯ ಕೊಲೆ ಮಾಡಿದ ಕ್ರೂರಿ: ಕೇರಳದಲ್ಲಿ ಬಯಲಾಯ್ತು ಹೇಯ ಕೃತ್ಯ

ವಲಸೆ ಕಾರ್ಮಿಕನೋರ್ವ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಆರೋಪಿಯು ಬಾಲಕಿಯ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಆಲುವಾ ಸ್ಥಳೀಯ ಮಾರುಕಟ್ಟೆಯ ಹಿಂಭಾಗದಲ್ಲಿ ಬಿಸಾಡಿದ್ದಾನೆ.
ಈ ಸಂಬಂಧ ಬಿಹಾರ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ. ಅಲುವಾ ಮಾರುಕಟ್ಟೆಯಲ್ಲಿ ಐದು ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿಯ ಶವವು ಗೋಣಿ ಚೀಲದಲ್ಲಿ ಪತ್ತೆಯಾಗಿದೆ. ಬಿಹಾರದಿಂದ ವಲಸೆ ಬಂದು ಎರ್ನಾಕುಲಂ ಜಿಲ್ಲೆಯಲ್ಲಿ ಕಾರ್ಮಿಕವಾಗಿ ಕೆಲಸ ಮಾಡುತ್ತಿರುವ ಅಸ್ಪಾಕ್ ಅಸ್ಲಾಂ ಎಂಬಾತನು ಡ್ರಗ್ಸ್ ಮತ್ತಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಗೋಣಿ ಚೀಲದಲ್ಲಿ ಕಟ್ಟಿ ಬಿಸಾಡಿದ್ದಾನೆ ಎಂದು ತಿಳಿದುಬಂದಿದೆ.
ಬಾಲಕಿಯನ್ನು ಗೋಣಿ ಚೀಲದಲ್ಲಿ ಕಟ್ಟಿ ಹಾಕಿದ ಕಾರಣ ಆಕೆಯು ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದಾಗ್ಯೂ ಬಾಲಕಿಯ ತಂದೆಯು ಶವವನ್ನು ಗುರುತಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸ್ಥಳದಲ್ಲಿ ಹೆಚ್ಚಿನ ಪರಿಶೀಲನೆ ನಡೆಸುತ್ತಿದೆ.
ಇನ್ನು ಘಟನೆ ಸಂಬಂಧಿಸಿದಂತೆ ಎರ್ನಾಕುಲಂ ಗ್ರಾಮೀಣ ಎಸ್‌ಪಿ ವಿವೇಕ್ ಕುಮಾರ್ ಮಾಹಿತಿ ನೀಡಿದ್ದು, ಬಾಲಕಿ ನಾಪತ್ತೆಯಾದ ಕುರಿತು ಮಾಹಿತಿ ಲಭ್ಯವಾಗುತ್ತಲೇ ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದೆವು. ಅಲ್ಪಾಕ್ ಅಸ್ಸಾಂನು ಬಾಲಕಿಯನ್ನು ಹೊತ್ತುಕೊಂಡು ಹೋಗುವುದನ್ನು ಗಮನಿಸಿದ ಬಳಿಕ ಆತನನ್ನು ಬಂಧಿಸಿದೆವು. ಇಡೀ ರಾತ್ರಿ ವಿಚಾರಣೆ ನಡೆಸಿದಾಗ ಆತನು ಅಪರಾಧ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw