50 ಅಡಿ ಆಳಕ್ಕೆ ಉರುಳಿ ಬಿದ್ದ ಬಸ್ : ಐವರು ಸ್ಥಳದಲ್ಲೇ ಸಾವು
ಇಂದೋರ್: ಮಧ್ಯಪ್ರದೇಶದ ಇಂದೋರ್ ನ ಸಿಮ್ರೋಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸ್ಸೊಂದು ಇಂದೋರ್ ನಿಂದ ಖಾಂಡ್ವಾಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಮರಿಗೆ ಬಿದ್ದ ಘಟನೆ ನಡೆದಿದೆ.
ಅಪಘಾತದ ಪರಿಣಾಮವಾಗಿ ಐವರು ಸಾವನ್ನಪ್ಪಿದ್ದು, 40 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. 10 ಜನ ಪ್ರಯಾಣಿಕರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಸಿಮ್ರೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಭೈರವ್ ಘಾಟ್ ನಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
50-60 ಪ್ರಯಾಣಿಕರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭ್ರಷ್ಟಾಚಾರದ ದುಡ್ಡಿನಿಂದ ಆಪರೇಷನ್ ಕಮಲ: ಸಿದ್ದರಾಮಯ್ಯ ಆರೋಪ
ಪತಿಗೆ ಪರಸ್ತ್ರಿ ಸಹವಾಸ: ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿದ ಪತ್ನಿ
ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಒಳ ಉಡುಪಿನಲ್ಲಿ ಚಿನ್ನ ಸಾಗಾಗಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ
ಪ್ರಾಂಶುಪಾಲರನ್ನು ಕರೆದು ಕಪಾಳಕ್ಕೆ ಬಾರಿಸಿದ ಜೆಡಿಎಸ್ ಶಾಸಕ!: ಅನಾಗರಿಕ ವರ್ತನೆ ಕಂಡು ಅಧಿಕಾರಿಗಳು ಶಾಕ್