ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಬಿದ್ದು 2 ವರ್ಷದ ಮಗು ಸಾವು
ಬೆಂಗಳೂರು: ಅಪಾರ್ಟ್ ಮೆಂಟ್ ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು 2 ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ ನಲ್ಲಿ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿ ನಿವಾಸಿ ರವೀಂದ್ರ ರೆಡ್ಡಿ ಅವರ ಪುತ್ರ 2 ವರ್ಷದ ದಿವ್ಯಾಂಶ್ ರೆಡ್ಡಿ ಮೃತ ಮಗುವಾಗಿದ್ದು, ಬಾಲ್ಕನಿಯಲ್ಲಿ ಆಟವಾಡುತ್ತಿದ್ದ ವೇಳೆ ಬಾಲಕ ಆಯತಪ್ಪಿ ಕೆಳಗೆ ಬಿದ್ದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಬಾಲಕನ ಅಜ್ಜಿ ಅಪಾರ್ಟ್ ಮೆಂಟ್ ನಲ್ಲಿ ಬಾಡಿಗೆ ಮನೆ ಹುಡುಕುತ್ತಾ ಬಂದಿದ್ದರು ಎನ್ನಲಾಗಿದೆ. ಅಜ್ಜಿ ಮನೆ ನೋಡುತ್ತಿದ್ದ ವೇಳೆ ಮೊಮ್ಮಗ ದಿವ್ಯಾಂಶ್ ರೆಡ್ಡಿ ಬಾಲ್ಕನಿಯಲ್ಲಿ ಆಟವಾಡುತ್ತಿದ್ದು, ಬಾಲ್ಕನಿಯ ಸಮೀಪದ ಪ್ಲಾಸ್ಟಿಕ್ ಶೀಟ್ ಮೇಲೆರಿದ ಮಗು ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಮಾಹಿತಿ ಸಂಗ್ರಹಿಸಿದ್ದು, ಘಟನೆ ಸಂಬಂಧ ತನಿಖೆ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗಂಗಾ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಶಂಕುಸ್ಥಾಪನೆ
ಭಾರತದ ಕುಸ್ತಿ ಸಂಸ್ಥೆ ಅಧ್ಯಕ್ಷನಿಂದ ಕುಸ್ತಿಪಟುವಿಗೆ ವೇದಿಕೆಯಲ್ಲೇ ಕಪಾಳಮೋಕ್ಷ
ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಿನ್ನೆಲೆ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ
ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಕೋಟಾ ಶ್ರೀನಿವಾಸ್ ಪೂಜಾರಿ
ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು: ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್