ಮನೆಗೆ ಬೆಂಕಿಯಿಟ್ಟು 6 ಜನರನ್ನು ಕೊಂದಿದ್ದ ಆರೋಪಿ ಮೃತದೇಹ ಪತ್ತೆ
06/04/2021
ಕೊಡಗು: ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 6 ಜನರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಶವ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದ್ದು, ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಏಪ್ರಿಲ್ 3ರಂದು ಪೊನ್ನಂಪೇಟೆ ತಾಲೂಕಿನ ನಾಕೂರು ಸಮೀಪದ ಮುಗುಚಿಕೇರಿ ಗ್ರಾಮ ಮನೆಗೆ ಬೆಂಕಿ ಹಚ್ಚಿ 6 ಜನರನ್ನು ಹತ್ಯೆ ಮಾಡಲಾಗಿತ್ತು. ಪತ್ನಿ ಹಾಗೂ ಇತರ 6 ಮಂದಿ ಅಳಿಯನ ಮನೆಯಲ್ಲಿ ಮಲಗಿದ್ದ ವೇಳೆ ಮನೆಯ ಬಾಗಿಲು ಹಾಕಿಕೊಂಡು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ.
ಆರೋಪಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈನಡುವೆ ಬೋಜನ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ನಡೆದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.