ಮೊಬೈಲ್ ಸಾಗಾಟದ ಲಾರಿ ತಡೆದು 6 ಕೋ.ರೂ. ಮೌಲ್ಯದ ಮೊಬೈಲ್ ದರೋಡೆ!
ಕೋಲಾರ: ಮೊಬೈಲ್ ಸಾಗಿಸುತ್ತಿದ್ದ ಲಾರಿಯನ್ನು ತಡೆದು ದರೋಡೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗ್ರಾಮದ ದೇವರಾಯಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಎಂಐ ಕಂಪೆನಿಗೆ ಸೇರಿದ ಮೊಬೈಲ್ ಫೋನ್ ಗಳನ್ನು ಲಾರಿಯ ಮೂಲಕ ತಮಿಳುನಾಡಿನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ವೇಳೆ ಕೋಲಾರ ಬಳಿಯಲ್ಲಿ ಲಾರಿಯಿಂದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ದರೋಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ತಮಿಳುನಾಡಿನ ಕಾಂಚಿಪುರಂನಿಂದ ಬೆಂಗಳೂರಿಗೆ ಮೊಬೈಲ್ ಲೋಡ್ ಬರುತ್ತಿತ್ತು. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದರೋಡೆಕೋರರು ಲಾರಿಯನ್ನು ದರೋಡೆ ನಡೆಸಿದ್ದಾರೆ. ಘಟನೆ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಸುದ್ದಿಗಳು…
ಎಲ್ಲ ವಿದ್ಯಾರ್ಥಿಗಳು ಪಾಸ್, ಶಿಕ್ಷಣ ಸಚಿವರು ಫೇಲ್! | ರಿ ಎಕ್ಸಾಮ್ ಬರೀತಾರಾ ಸುರೇಶ್ ಕುಮಾರ್?
“ಕೋತಿ ತಾನು ಕೆಡುವುದಲ್ಲದೇ ವನವನ್ನೆಲ್ಲ ಕೆಡಿಸ್ತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಎಸ್ ಡಿಪಿಐ ಆಕ್ರೋಶ
ಬಿಗ್ ನ್ಯೂಸ್: ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್
“ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ”