ಪತಿ ಜೊತೆ ಜಗಳ: ತನ್ನ ಆರು ಮಕ್ಕಳನ್ನು ಬಾವಿಗೆಸೆದ ಪಾಪಿ ತಾಯಿ!
ಮಹಾರಾಷ್ಟ್ರ: ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಮಾಹಿತಿ ಪ್ರಕಾರ, ಪತಿ ಜೊತೆ ಮಹಿಳೆ ಜಗಳವಾಡಿದ್ದು,ನಂತರ ತನ್ನ ಐವರು ಪುತ್ರಿಯರು ಹಾಗೂ ಒಂದೂವರೆ ವರ್ಷದ ಮಗನನ್ನು ಬಾವಿಗೆ ಎಸೆದು, ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾವಿಯಲ್ಲಿದ್ದ ಎಲ್ಲಾ ಮೃತದೇಹಗಳನ್ನು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ದೂರು ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಣ ನೀಡಿ ನಿಮ್ಮನ್ನು ಸಚಿವರಾಗಿ ಮಾಡ್ತೇವೆ ಅಂದಿದ್ರು: ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ
ಅತಿಯಾಗಿ ಟೀ ಕುಡಿಯುತ್ತೀರಾ? ಹಾಗಿದ್ದರೆ, ಕಾದಿದೆ ಅಪಾಯ!
ಮುಸ್ಲಿಮ್ ಮಹಿಳೆಯರ ಧಾರ್ಮಿಕ ವಸ್ತ್ರ ಬುರ್ಖಾ ಧರಿಸಿ ಅಸಭ್ಯ ನೃತ್ಯ!
ರಣರಂಗವಾದ ರೈತ ಮುಖಂಡರ ಸಭೆ: ರೈತ ಮುಖಂಡ ಟಿಕಾಯತ್ ಮೇಲೆ ಹಲ್ಲೆ, ಮಸಿ ಎರಚಿದ ಕಿಡಿಗೇಡಿ