6 ಮಕ್ಕಳನ್ನು ರಕ್ಷಿಸಿ ಕಣಜದ ಹುಳುಗಳಿಗೆ ಬಲಿಯಾದ ಗೃಹ ರಕ್ಷಕ ಸಿಬ್ಬಂದಿ
ಮುಲ್ಕಿ: ಕಣಜದ ಹುಳುಗಳಿಂದ ಕಡಿಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ 6 ಮಕ್ಕಳನ್ನು ರಕ್ಷಿಸಿದ ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ರಾತ್ರಿ ಮುಲ್ಕಿಯ ಕಿನ್ನಿಗೋಳಿಯಲ್ಲಿ ನಡೆದಿದೆ.
ಇಲ್ಲಿನ ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ 35 ವರ್ಷ ವಯಸ್ಸಿನ ಸಂತೋಷ್ ಮೃತ ಗೃಹರಕ್ಷಕ ದಳ ಸಿಬ್ಬಂದಿ ಎಂದು ತಿಳಿದು ಬಂದಿದೆ. ಇವರು ಮಂಗಳೂರಿನ ಕಂಕನಾಡಿ ಠಾಣೆಯ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದರು.
ಬುಧವಾರ ಸಂಜೆ ಕಿನ್ನಿಗೋಳಿಯ ಶ್ರೀರಾಮ ಮಂದಿರದ ಬಳಿಯಲ್ಲಿ ಆಟೋದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ, ಕಿನ್ನಿಗೋಳಿ ಪರಿಸರದಲ್ಲಿ ಕಣಜದ ಹುಳುಗಳು ಶಾಲೆಯ ಮಕ್ಕಳ ಮೇಲೆ ದಾಳಿ ನಡೆಸಿದ್ದು, ಮಕ್ಕಳು ಗಂಭೀರಾವಸ್ಥೆಯಲ್ಲಿದ್ದರು. ಈ ವೇಳೆ ತಡ ಮಾಡದೇ ಅವರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.
ಮಕ್ಕಳನ್ನು ರಕ್ಷಿಸುವ ವೇಳೆ ಸಂತೋಷ್ ಅವರ ಮೇಲೆಯೂ ಕಣಜದ ಹುಳುಗಳು ದಾಳಿ ಮಾಡಿತ್ತು. ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದ ಸಂತೋಷ್ ಅವರು ತಾವು ಚಿಕಿತ್ಸೆ ಪಡೆದುಕೊಂಡಿರಲಿಲ್ಲ ಎನ್ನಲಾಗಿದೆ. ರಾತ್ರಿ ಸುಮಾರು 9 ಗಂಟೆಯ ವೇಳೆ ತಮ್ಮ ಮನೆಯಲ್ಲ ಕುರ್ಚಿಯಲ್ಲಿ ಕುಳಿತಿದ್ದ ವೇಳೆ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರು ತಾಯಿ, ಪತ್ನಿ ಹಾಗೂ ಮೂವರು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಕಣಜದ ಹುಳುಗಳನ್ನು ಲೆಕ್ಕಿಸದೇ 6 ಮಕ್ಕಳನ್ನು ರಕ್ಷಿಸಿ ನಿಧನರಾದ ಸಂತೋಷ್ ಅವರ ಸಾಮಾಜಿಕ ಕಾರ್ಯಕ್ಕೆ ವ್ಯಾಪಕ ಪ್ರಸಂಶೆ ವ್ಯಕ್ತವಾಗಿದೆ. ಜೊತೆಗೆ ಅವರ ನಿಧನಕ್ಕೆ ಸಾರ್ವಜನಿಕರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಾರೀ ಮಳೆಗೆ ಬೆಂಗಳೂರಿನಲ್ಲಿ ಕುಸಿದು ಬಿದ್ದ ಮನೆ | ಮನೆಯಲ್ಲಿದ್ದವರು ಮಾಡಿದ್ದೇನು?
ಸೆಗಣಿ ತಿಂದು, ನೀವೂ ತಿನ್ನಿ ಎಂದು ಕರೆ ನೀಡಿದ ಹುಚ್ಚ ವೈದ್ಯ!
ಬಿಗ್ ನ್ಯೂಸ್: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಮೋದಿ ಸರ್ಕಾರ!
ಬೆಂಗಳೂರು: ನದಿಯಂತಾದ ರಸ್ತೆ, ವ್ಯಾಪಾರ ಕಳೆದುಕೊಂಡ ವ್ಯಾಪಾರಿಗಳು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ
ಸಿನಿಮಾಗೆ ಪ್ರೇರಣೆಯಾದ ಪಾರ್ವತಿ ಅಮ್ಮಾಳ್ ಅವರ ಹೆಸರಿಗೆ 10 ಲಕ್ಷ ರೂ. ಠೇವಣಿ ಇಡಲಿರುವ ನಟ ಸೂರ್ಯ!