ಕುಂಭಮೇಳಕ್ಕೆ ತೆರಳಿದ್ದ ಒಂದೇ ಕುಟುಂಬದ 6 ಮಂದಿ ಅಪಘಾತಕ್ಕೆ ಬಲಿ

ಲಕ್ನೋ: ಪ್ರಯಾಗ್ ರಾಜ್ ಕುಂಭ ಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಮಂದಿ ಲಾರಿ ಹಾಗೂ ಕ್ರೂಸರ್ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.
ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದರೆ, ಇನ್ನುಳಿದವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಬೀದರ್ ನಗರದ ಲಾಡಗೇರಿ ಬಡಾವಣೆಯ ಸುನೀತಾ(35), ಸಂತೋಷ್(43) ನೀಲಮ್ಮ (60) ಸೇರಿದಂತೆ 6 ಮಂದಿ ಅಪಘಾತದಲ್ಲಿ ಬಲಿಯಾದವರು ಎಂದು ಗುರುತಿಸಲಾಗಿದೆ. ಕ್ರೂಸರ್ ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದರು.
ಪುಣ್ಯಸ್ನಾನ ಮಾಡಿದ ಬಳಿಕ ಪ್ರಯಾಗ್ ರಾಜ್ ನಿಂದ ಕಾಶಿ ಕಡೆಗೆ ಕ್ರೂಸರ್ ತೆರಳುತ್ತಿತ್ತು. ಕಾಶಿಯಿಂದ 20 ಕಿ.ಮೀ. ದೂರದದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: