6 ಮುಸ್ಲಿಂ ರಾಷ್ಟ್ರಗಳ ಮೇಲೆ ದಾಳಿ ನಡೆಸಿದ್ರಂತೆ ಒಬಾಮಾ: ಅಮೆರಿಕದ ಮಾಜಿ ಅಧ್ಯಕ್ಷರನ್ನು ಸಚಿವೆ ನಿರ್ಮಲಾ ತರಾಟೆಗೆ ತೆಗೆದುಕೊಂಡಿದ್ಯಾಕೆ..?
ಮುಸ್ಲಿಂ ರಾಷ್ಟ್ರಗಳ ಮೇಲೆ 26,000 ಬಾಂಬ್‌ಗಳ ದಾಳಿ ನಡೆಸಿದವರು ಈಗ ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಂದು ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಸಂವಾದದಲ್ಲಿ ಮೋದಿಯನ್ನು ಪ್ರಶ್ನೆ ಮಾಡಬೇಕಿತ್ತು ಎಂಬ ಬರಾಕ್ ಒಬಾಮ ಹೇಳಿಕೆಗೆ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.
ಅಮೆರಿಕದಲ್ಲಿ ಒಬಾಮ ಅವರು ಅಧಿಕಾರದಲ್ಲಿದ್ದಾಗಲೇ 6 ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆದಿತ್ತು. ಆದ್ರೆ ನಮ್ಮ ಸರ್ಕಾರ ʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ತತ್ವದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದಕ್ಕೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ನಾವು ಅಮೆರಿಕದ ಜೊತೆಗೆ ಸ್ನೇಹ ಬಯಸುತ್ತೇವೆ. ಆದರೆ ಅಲ್ಲಿಯೂ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಟೀಕೆಗಳು ಕೇಳಿಬಂದಿವೆ. ಅಮೆರಿಕದ ಮಾಜಿ ಅಧ್ಯಕ್ಷರ ಅವಧಿಯಲ್ಲೇ 6 ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಮೇಲೆ 26,000ಕ್ಕೂ ಹೆಚ್ಚು ಬಾಂಬ್ ದಾಳಿ ನಡೆದಿತ್ತು. ಅಂಥವರು ಮೋದಿ ಬಗ್ಗೆ ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಆರೋಪ ಮಾಡಿದರೆ ಯಾರು ನಂಬುತ್ತಾರೆ..? ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾದ 13 ಗೌರವ ಪ್ರಶಸ್ತಿಗಳಲ್ಲಿ 6 ಪ್ರಶಸ್ತಿಗಳು ಮುಸ್ಲಿಂ ಬಹುಸಂಖ್ಯಾತ ದೇಶಗಳೇ ನೀಡಿದ್ದು ಎಂದು ಹೇಳಿದರು.
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಯುಎಸ್ ಮಾಜಿ ಅಧ್ಯಕ್ಷ ಜೋ ಬೈಡನ್, ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ವಿಷಯವನ್ನ ಪ್ರಸ್ತಾಪಿಸಬೇಕಿತ್ತು ಎಂದಿದ್ದರಲ್ಲದೇ, ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ಏನಾಗುತ್ತದೆ? ಎಂಬುದನ್ನು ಕೇಳುವಂತೆ ಒಬಾಮ ಒತ್ತಾಯಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw