ಶರಣಾಗತ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!
10/01/2025
ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಪೊಲೀಸರ ಮುಂದೆ ಶರಣಾದ 6 ಮಂದಿ ನಕ್ಸಲರು ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಬಿಗಿ ಪೊಲೀಸ್ ಭದ್ರತೆಯೊಂದಿಗೆ ಅವರನ್ನು ಜೈಲಿಗೆ ಕಳುಹಿಸಲಾಯಿತು.
ಹೈ ಸೆಕ್ಯೂರಿಟಿ ಬ್ಯಾರಕ್ ಗೆ ಪುರುಷ ನಕ್ಸಲರು ಹಾಗೂ ಮಹಿಳಾ ಬ್ಯಾರಕ್ ಗೆ ಮಹಿಳಾ ನಕ್ಸಲರು ಶಿಫ್ಟ್ ಆಗಿದ್ದಾರೆ. 3 ಕೆಎಸ್ ಆರ್ ಪಿ, 5ಕ್ಕೂ ಹೆಚ್ಚು ವಾಹನಗಳ ಹೈ ಸೆಕ್ಯೂರಿಟಿ ಮೂಲಕ ಶರಣಾಗತ ನಕ್ಸಲರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಯಿತು.
ಗುರುವಾರ ಮಧ್ಯಾಹ್ನ ಶರಣಾಗತ ನಕ್ಸಲರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದರು. 6 ಮಂದಿಗೂ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿ ಆದೇಶ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: