PUC ಪಾಸಾದವರಿಗೆ 60,000 ರೂ. ವಿದ್ಯಾರ್ಥಿವೇತನ: ನೇರವಾಗಿ ಖಾತೆಗೆ ಜಮಾ
ದ್ವಿತೀಯ ಪಿಯುಸಿ ಪಾಸ್ ಆಗಿ ವೃತ್ತಿಪರ ಪದವಿ ಕೋರ್ಸ್ ಅಧ್ಯಯನ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ 60,000 ವರೆಗೆ ವಿದ್ಯಾರ್ಥಿ ವೇತನ ನೀಡಲು “ಯು ಗೋ” ಸಂಸ್ಥೆಯು ಅರ್ಜಿ ಆಹ್ವಾನಿಸಿದೆ.
U–Go Scholarship 2024 — ಯುಗೋ ಸಂಸ್ಥೆಯ ಸಿಎಸ್ಆರ್ ಉಪಕ್ರಮವಾಗಿರುವ ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ವೃತ್ತಿಪರ ಪದವಿ ಕೋರ್ಸ್ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯವಾಗುವಂತೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಹಾಗಾದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವ ಯಾವ ವಿದ್ಯಾರ್ಥಿಗಳು ಅರ್ಹರು? ಅರ್ಜಿ ಹೇಗೆ ಸಲ್ಲಿಸಬೇಕು ಸೇರಿದಂತೆ ಇತರೆ ಪ್ರಮುಖ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ..
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು:
ಮೊದಲೇ ತಿಳಿಸಿರುವಂತೆ ಪ್ರಸ್ತುತ ವೃತ್ತಿಪರ ಪದವಿ ಶಿಕ್ಷಣ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಇದರ ಜೊತೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿನಿಯರು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 70% ಅಂಕಗಳೊಂದಿಗೆ ಪಾಸಾಗಿರಬೇಕು. ಅದೇ ರೀತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನವು 5 ಲಕ್ಷ ರೂಪಾಯಿ ಒಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:
* 10ನೇ ತರಗತಿ ಮತ್ತು 12ನೇ ತರಗತಿಯ ಅಂಕಪಟ್ಟಿ
* ಗುರುತಿನ ಚೀಟಿ
* ಪ್ರಸ್ತುತ ಶೈಕ್ಷಣಿಕ ದಾಖಲಾತಿ ಪುರಾವೆ
* ಬ್ಯಾಂಕ್ ಖಾತೆ ವಿವರಗಳು
ಅರ್ಜಿ ಸಲ್ಲಿಸುವ ವಿಧಾನ :
ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಕೆಳಗಿ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮೊದಲ ನೊಂದಣಿ ಮಾಡಿಕೊಳ್ಳಬೇಕು. ನಂತರದಲ್ಲಿ ಅಲ್ಲಿ ಕೇಳಲಾಗಿರುವ ಪ್ರತಿಯೊಂದು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಗಿಸಬೇಕು.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸುವ ಅಧಿಕೃತ ಜಾಲತಾಣದ ಲಿಂಕ್: https://www.buddy4study.com/page/ugo-scholarship-program
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: