ದಲಿತರಿಗೆ ಸೇರಬೇಕಿದ್ದ 68 ಎಕರೆ ಜಮೀನು ಡಿಕೆಶಿ ಲಪಟಾಯಿಸಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ದಲಿತರಿಗೆ ಸೇರಬೇಕಿದ್ದ 68 ಎಕರೆ ಜಮೀನು, ದಲಿತರಿಗೆ ಸಿಗಬೇಕಾಗಿದ್ದ ನಿವೇಶನಗಳನ್ನು ಡಿ.ಕೆ.ಶಿವಕುಮಾರ್ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬಿಜೆಪಿ—ಜೆಡಿಎಸ್ ಪಾದಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ. ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದ್ದೆ. ಯಾರಿಗೂ ಮೋಸ ಮಾಡಿಲ್ಲ ಎಂದು ಹೆಚ್ ಡಿಕೆ ಹೇಳಿದರು.
ಹೆಣ್ಣು ಮಗಳೊಬ್ಬಳನ್ನ ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ಇವರು. ಆ ಹೆಣ್ಣುಮಗಳ ಕಿಡ್ನ್ಯಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದೀರಿ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು, ವಿಜಯೇಂದ್ರದು ಏನಿದೆ ನಿಮ್ಮ ಬಳಿ ಬಿಚ್ಚಿ? ಎಂದು ಕುಮಾರಸ್ವಾಮಿ ಸವಾಲು ಹಾಕಿದರು.
ನಾನು ಬಿಚ್ಚೋಕೆ ಹೋದ್ರೆ ನಿಮ್ಮದು ಪುಟ ಗಟ್ಟಲೆ ಇದೆ. ಅದನ್ನ ತನಿಖೆ ಮಾಡೋದಕ್ಕೆ ಹತ್ತತ್ತು ಸಿಬಿಐ, ಇಡಿ ಸಂಸ್ಥೆಗಳನ್ನ ಸ್ಥಾಪನೆ ಮಾಡ್ಬೇಕು. ಅಜ್ಜಯ್ಯನ ಬಗ್ಗೆ ಶಿವಕುಮಾರ್‌ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ನೀವು ಪ್ರಾಮಾಣಿಕವಾಗಿ ಬೆಳೆದು ಬಂದ್ರಾ ಅಂತ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರು ಸರ್ಕಾರದ ಆಸ್ತಿ ಲಪಟಾಯಿಸಿದ್ದಾರೆ. ಇದರ ದಾಖಲೆ ಸದನದಲ್ಲಿ ಇಟ್ಟಿದೀವಿ. ಕಾಂಗ್ರೆಸ್ ನಾಯಕರು ಉತ್ತರ ಕೊಡದೇ ಪಲಾಯನ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: