ಅ.3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ | ಬಸವರಾಜ ಬೊಮ್ಮಾಯಿ - Mahanayaka

ಅ.3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ | ಬಸವರಾಜ ಬೊಮ್ಮಾಯಿ

basavaraj bommai
24/09/2021

ಬೆಂಗಳೂರು: ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣ ಸಂಬಂಧ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೈಟ್ ಕರ್ಫ್ಯೂ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ನುಮುಂದೆ ರಾತ್ರಿ 10ರಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಕ್ಟೋಬರ್ 3ರಿಂದ ಪಬ್‌ಗಳಲ್ಲೂ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 0.66 ರಷ್ಟಿದೆ. ಅಕ್ಟೋಬರ್ 1 ರಿಂದ ಕೊವಿಡ್ ಪಾಸಿಟಿವಿಟಿ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು. ಪಾಸಿಟಿವಿಟಿ ದರ ಶೇಕಡಾ 1ರಷ್ಟು  ಆದರೆ ಶೇ 50 ರಷ್ಟು ಭರ್ತಿಗೆ ಹಾಗೂ ಶೇಕಡಾ 2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು ಎಂಬ ನಿರ್ಧಾರವನ್ನು ಇಂದಿನ ಸಭೆಯಲ್ಲಿ ಕೈಗೊಳ್ಳಲಾಯಿತು.

ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಚಿತ್ರಮಂದಿರಗಳಿಗೆ ಪ್ರವೇಶ ನೀಡುವುದು,  ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ.  ರಾತ್ರಿ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನಿಗದಿಪಡಿಸಲಾಗುವುದು. ದಸರಾ ಬಗ್ಗೆ ಪ್ರತ್ಯೇಕ ಮಾರ್ಗ ಸೂಚಿ ಹೊರಡಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಗಡಿ ಭಾಗದಲ್ಲಿ ಹೆಚ್ಚು, ನಿಗಾ ವಹಿಸಲಾಗುವುದು ಹಾಗೂ ಯಾದಗಿರಿ, ರಾಯಚೂರು, ಕಲಬುರಗಿ, ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು, ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಪೆಟ್ರೋಲ್, ಡೀಸೆಲ್ ಗೆ ನೀರು ಬೆರಕೆ | ಪೆಟ್ರೋಲ್ ಬಂಕ್ ಮಾಲಿಕನ ವಿರುದ್ಧ ಗ್ರಾಹಕರಿಂದ ತೀವ್ರ ಆಕ್ರೋಶ

ಕಳೆದ 6 ವರ್ಷಗಳಿಂದ ಈ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನೇ ನೇಮಿಸಿಲ್ಲ!

ಪತ್ನಿ ದಿನವೂ ಸ್ನಾನ ಮಾಡುತ್ತಿಲ್ಲ ಎಂದು ವಿಚ್ಛೇದನ ನೀಡಿದ ಪತಿ

ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು ಎಂದ ಉತ್ತರ ಪ್ರದೇಶ ಸಚಿವ!

ಸದಾ ಹಿಂಸಿಸುವ ಮೈಕೈ ನೋವಿಗೆ ಶಾಶ್ವತ ಪರಿಹಾರ ಏನು?

ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ | ಕೆಮಿಕಲ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟ

ಇತ್ತೀಚಿನ ಸುದ್ದಿ