ಫಾರ್ಮಾ ಘಟಕದಲ್ಲಿ ಇದ್ದಕ್ಕಿದ್ದಂತೆ ನಿಗೂಢ ಸ್ಫೋಟ: ಬೆಚ್ಚಿಬೀಳಿಸಿದ ಸ್ಫೋಟದ ಸದ್ದು
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಅಚ್ಯುತಪುರಂನಲ್ಲಿರುವ ವಿಶೇಷ ಆರ್ಥಿಕ ವಲಯದ ಫಾರ್ಮಾ ಘಟಕದಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟ ಮತ್ತು ಭಾರಿ ಬೆಂಕಿ ಅವಘಡದಲ್ಲಿ ಏಳು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಶಕ್ತಿ ಫಾರ್ಮಾ ಪ್ರೈವೇಟ್ ಲಿಮಿಟೆಡ್ ನ ರಿಯಾಕ್ಟರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ.
ಈ ಸ್ಫೋಟ ಮತ್ತು ಬೆಂಕಿಯು ಘಟಕದಲ್ಲಿನ ಕಾರ್ಮಿಕರಲ್ಲಿ ಭೀತಿಯನ್ನುಂಟು ಮಾಡಿತು. ಏಳು ಕಾರ್ಮಿಕರು ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಫಾರ್ಮಾ ಘಟಕದ ಸುತ್ತಮುತ್ತಲಿನ ಪ್ರದೇಶಗಳನ್ನು ದಟ್ಟವಾದ ಹೊಗೆ ಆವರಿಸಿದೆ.
ಈ ಘಟನೆ ನಡೆಯುವ ವೇಳೆ 35 ಮಂದಿ ಕಾರ್ಮಿಕರು ಕರ್ತವ್ಯದಲ್ಲಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಮುರಳಿ ಕೃಷ್ಣ ತಿಳಿಸಿದ್ದಾರೆ. ಇವರಲ್ಲಿ 28 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದರೆ, ಏಳು ಮಂದಿ ಗಾಯಗೊಂಡಿದ್ದಾರೆ.
ಭುವನೇಶ್ವರದ ರಮೇಶ್ (45), ಅನಕಪಲ್ಲಿ ಜಿಲ್ಲೆಯ ನಿವಾಸಿಗಳಾದ ಸತ್ತಿ ಬಾಬು (35), ನುಕಿ ನಾಯ್ಡು (40) ಮತ್ತು ತಿರುಪತಿ (40), ರಾಜು ಬಾಬು, ಅಪ್ಪಾ ರಾವ್ ಮತ್ತು ಪಿ.ಸಂತೋಷ್ ಕುಮಾರ್ ಗಂಭೀರವಾಗಿ ಗಾಯಗೊಂಡವರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw