ರಿಯಲ್ ಎಸ್ಟೇಟ್ ಏಜೆಂಟ್ ನ ಕಿಡ್ನ್ಯಾಪ್: 7 ಮಂದಿ ಅರೆಸ್ಟ್
23/07/2022
ವಿಜಯನಗರ: ರಿಯಲ್ ಎಸ್ಟೇಟ್ ಏಜೆಂಟ್ ನನ್ನು ಅಪಹರಿಸಿ 20 ಲಕ್ಷ ರೂಪಾಯಿ ಹಣ ದೋಚಿದ 7 ಮಂದಿ ಆರೋಪಿಗಳನ್ನು ವಿಜಯನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ಶಾಂತ ಕುಮಾರ್, ಅಲ್ತಾಫ್, ಚಿರಾಗ್, ರಾಕೇಶ್, ರಾಹುಲ್, ಮಂಜುನಾಥ್, ಶಿವಕುಮಾರ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದ್ದು, ರಿಯಲ್ ಎಸ್ಟೇಟ್ ಏಜೆಂಟ್ ಹಾಲೇಶ್ ಎಂಬವರನ್ನು ಅಪಹರಿಸಿ 20 ಲಕ್ಷ ರೂಪಾಯಿ ಕಸಿದುಕೊಂಡು 80 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಘಟನೆ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ 5 ಮೊಬೈಲ್, 2 ಮಚ್ಚು, 2 ಚಾಕು ಸೇರಿದಂತೆ ನಗದು ವಶಪಡಿಸಿಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka