ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅವಹೇಳನಕಾರಿ ನಾಟಕ ಪ್ರದರ್ಶನ: ಜೈನ್ ವಿವಿಯ 7 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ - Mahanayaka
6:20 AM Thursday 6 - February 2025

ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅವಹೇಳನಕಾರಿ ನಾಟಕ ಪ್ರದರ್ಶನ: ಜೈನ್ ವಿವಿಯ 7 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

jain students
13/02/2023

ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ  ಸಿದ್ಧಾಪುರ ಠಾಣೆ ಪೊಲೀಸರು 7 ಜನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದುಕೊಂಡಿರುವ ಕಾಲೇಜಿನಲ್ಲಿ 5ನೇ ಸೆಮಿಸ್ಟರ್‌ ನ ಬೇರೆ ಬೇರೆ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರೆಂದು ಗೊತ್ತಾಗಿದೆ.

ಫೆ. 8 ರಂದು ನಿಮ್ಹಾನ್ಸ್ ಕನ್ವೆನ್ಸನ್​ ಸೆಂಟರ್​’ನಲ್ಲಿ ಜೈನ್​ ವಿವಿಯಿಂದ ಹಮ್ಮಿಕೊಂಡಿದ್ದ ಫೆಸ್ಟ್ ಕಾರ್ಯಕ್ರಮದಲ್ಲಿ ನಾಟಕದ ಸ್ಕಿಟ್’​ವೊಂದರಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಬಿ.ಆರ್ ಬದಲು ಬೇರೆ ಪದ ಬಳಸಿ ಗೇಲಿ ಮಾಡಲಾಗಿತ್ತು. ಅಂಬೇಡ್ಕರ್ ಅವಮಾನಿಸಿದ ಈ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ಎಂಬುವರು ನೀಡಿದ ದೂರಿನ‌ ಮೇರೆಗೆ ಕಾಲೇಜು ಪ್ರಾಂಶುಪಾಲ, ಡೀನ್, ಕಾರ್ಯಕ್ರಮದ ಆಯೋಜಕರು, ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು ಹಾಗೂ ಸ್ಕಿಟ್ ಬರಹಗಾರರ ವಿರುದ್ಧ ಎಸ್‌’ಸಿ, ಎಸ್‌’ಟಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿಂತೆ 7 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿದ್ಧಾಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.

ಜಯನಗರ ಎಸಿಪಿ ಶ್ರೀನಿವಾಸ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಸ್ಟೂಡೆಂಟ್ಸ್ ಸ್ಕಿಟ್ ಪ್ರದರ್ಶನದಿಂದಾಗಿ ಕಾಲೇಜಿಗೆ ಮುಜುಗರ ಎದುರಾಗಿರುವ ಹಿನ್ನೆಲೆಯಲ್ಲಿ ಜೈನ್‌ ಕಾಲೇಜು ಆಡಳಿತ ಮಂಡಳಿ ಅಸಮಾಧಾನಗೊಂಡಿದ್ದು, ಈಗಾಗಲೇ ಬೇಷರತ್ ಕ್ಷಮೆಯಾಚಿಸಿದೆ. ಹಾಗೆಯೇ ಸ್ಕಿಟ್’ನಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂದು ತಿಳಿದುಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ