7 ನೇ ವೇತನ ಆಯೋಗ: ಮಧ್ಯಂತರ ವರದಿ ಪಡೆದು ಅನುಷ್ಠಾನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: 7 ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಒಪ್ಪಿದೆ. ನಾವು ಕೂಡಲೇ 7 ನೇ ಆಯೋಗಕ್ಕೆ ಸೂಚನೆ ನೀಡಿ ಮಧ್ಯಂತರ ವರದಿ ಪಡೆದು ಅದರ ಅನುಷ್ಠಾನಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು. ಸಿ.ಎ.ಆರ್ ಸಿಬ್ಬಂದಿ ಬಲ ಪಡಿಸುವ ಬಗ್ಗೆ ಡಿ.ಜಿ ಅವರಿಗೆ ಸೂಚನೆ ನೀಡಲಾಗಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw