ಹಲವಾರು ಜೀವಗಳಿಗೆ ಬೆಳಕಾದ ರಕ್ಷಿತಾ: 9 ಅಂಗಾಂಗಗಳ ದಾನ
ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪ್ರಥಮ ಪಿಯುಸಿ ರಕ್ಷಿತಾಳ ಹೃದಯ ಕಸಿಗಾಗಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೃದಯ ರವಾನೆ ಮಾಡಲಾಗಿದೆ.
ವಿಶೇಷ ಹೆಲಿಕಾಫ್ಟರ್ ಮೂಲಕ ಜೀವಂತ ಹೃದಯ ರವಾನೆ ಮಾಡಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆ ಮಾಡಲಾಗಿದೆ. ಬೆಳಗ್ಗಿನಿಂದಲೇ ಹೃದಯ ಕಸಿ ಪ್ರಕ್ರಿಯೆ ನಡೆಸಲಾಗಿತ್ತು.
ಮೆದುಳು ನಿಷ್ಕ್ರಿಯಗೊಂಡಿದ್ದ ರಕ್ಷಿತಾಳ ತಂದೆ ತಾಯಿ ತಮ್ಮ ನೋವಿನಲ್ಲೂ ಪರರಿಗೆ ತಮ್ಮ ಮಗಳ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಒಟ್ಟು 9 ಅಂಗಾಂಗಗಳನ್ನು ದಾನ ಮಾಡಲಾಗಿದ್ದು, ಈ ಮೂಲಕ ಹಲವರು ಜನರ ಬಾಳಿಗೆ ರಕ್ಷಿತಾ ಬೆಳಕಾಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka