9 ವಾಹನಗಳ ನಡುವೆ ಭೀಕರ ಸರಣಿ ಅಪಘಾತ: ಅಪಘಾತಕ್ಕೆ ಕಾರಣ ಏನು ಗೊತ್ತಾ? - Mahanayaka

9 ವಾಹನಗಳ ನಡುವೆ ಭೀಕರ ಸರಣಿ ಅಪಘಾತ: ಅಪಘಾತಕ್ಕೆ ಕಾರಣ ಏನು ಗೊತ್ತಾ?

accident
30/12/2021

ಬೆಂಗಳೂರು: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 9 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ.

ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‍ ಆರ್‍ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ್ದಾರೆ.  ಹಿಂದೆಯೇ ವೇಗವಾಗಿ ಬರುತ್ತಿದ್ದ ಲಾರಿ ಬಸ್‍ ಗೆ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ ಲಾರಿ ಸೇರಿದಂತೆ ಒಂಬತ್ತು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ ಎಂದು ವರದಿಯಾಗಿದೆ.

ಅಪಘಾತದ ರಭಸಕ್ಕೆ ಲಾರಿ ಹಾಗೂ ಇತರ ವಾಹನಗಳು  ರಸ್ತೆ ವಿಭಜಕದ ಮೇಲೆರಿದ್ದು, ರಸ್ತೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯವಸ್ತವಾಗಿತ್ತು. ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಬೆಳಗ್ಗೆ 11 ಗಂಟೆಯವರೆಗೂ ಹರಸಾಹಸ ಪಡುವಂತಾಯಿತು.

ಘಟನೆಯಲ್ಲಿ  ಓರ್ವ ವಾಹನ ಚಾಲಕನ ಕಾಲು ಮುರಿತಕ್ಕೊಳಗಾಗಿದೆ. ಉಳಿದಂತೆ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು  ತಿಳಿದು ಬಂದಿವೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಾಂಧೀಜಿಯ ಅವಹೇಳನ: ಹಿಂದೂ ಸಂತ ಕಾಳಿ ಚರಣ್ ಅರೆಸ್ಟ್

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: 6 ಉಗ್ರರ ಹತ್ಯೆ | ಯೋಧ ಹುತಾತ್ಮ, ಮೂವರಿಗೆ ಗಾಯ

ಗ್ರಾ.ಪಂ. ಉಪ ಚುನಾವಣೆ:  ಅಜ್ಜಿಯನ್ನು ಸೋಲಿಸಿದ ಮೊಮ್ಮಗಳು!

ಮತಾಂತರ ತಡೆಯಲು ವಿಶೇಷ ಕಾರ್ಯಪಡೆ:  ಸಿಎಂ ಬೊಮ್ಮಾಯಿ

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್

ಇತ್ತೀಚಿನ ಸುದ್ದಿ