ರಾಜ್ಯದಲ್ಲಿ ಕರ್ಫ್ಯೂ ಮುಂದುವರಿಸುವ ಸಾಧ್ಯತೆ ಇದೆ | ಸಚಿವ ಸದಾನಂದ ಗೌಡ
25/04/2021
ಬೆಂಗಳೂರು: ವೀಕೆಂಡ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.
ರಾಜ್ಯದಲ್ಲಿ ಅಗತ್ಯ ಬಿದ್ದರೆ, ಕರ್ಫ್ಯೂ ಮುಂದುವರಿಸುವ ಸಾಧ್ಯತೆ ಇದೆ ಎಂದು ಸದಾನಂದ ಗೌಡ ಹೇಳಿದ್ದು, 15 ದಿನಗಳ ಬಳಿಕ ಸೋಂಕು ಹರಡುತ್ತಿರುವ ಪ್ರಮಾಣ ಕಡಿಮೆಯಾದರೂ ಆಗಬಹುದು ಎಂದು ಹೇಳಿದ್ದಾರೆ.
ಇನ್ನೂ ಆಕ್ಸಿಜನ್ ಮತ್ತು ರೆಮ್ ಡೆಸಿವಿರ್ ಕೊರತೆ ಇತ್ತು. ಕೇಂದ್ರ ಸರ್ಕಾರ ಅಗತ್ಯವಾದ ರೆಮ್ ಡೆಸಿವಿರ್ ಪೂರೈಕೆಗೆ ಒಪ್ಪಿಗೆ ನೀಡಿದೆ. 1.22 ಲಕ್ಷ ರೆಮ್ ಡೆಸಿವರ್ ಪೂರೈಕೆಗೆ ಒಪ್ಪಿಗೆ ನೀಡಲಾಗಿದ್ದು, 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.