ಕೊರೊನಾ ಸಂಕಷ್ಟದ ನಡುವೆ ಸಿಎಂ ಯಡಿಯೂರಪ್ಪಗೆ ಪತ್ರ ಬರೆದ ಶೋಭಾ ಕರಂದ್ಲಾಜೆ! - Mahanayaka
10:57 AM Thursday 12 - December 2024

ಕೊರೊನಾ ಸಂಕಷ್ಟದ ನಡುವೆ ಸಿಎಂ ಯಡಿಯೂರಪ್ಪಗೆ ಪತ್ರ ಬರೆದ ಶೋಭಾ ಕರಂದ್ಲಾಜೆ!

yediyurappa and shobha karandlaje
25/04/2021

ಬೆಂಗಳೂರು: ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಹೆಚ್ಳವಾಗುತ್ತಿದ್ದಂತೆಯೇ ಸಂಸದೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ  ಸಲಹೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರ ಪಡೆದುಕೊಳ್ಳಬೇಕು ಸೇರಿದಂತೆ ವಿವಿಧ ಒತ್ತಾಯಗಳನ್ನು ಶೋಭಾ ಕರಂದ್ಲಾಜೆ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಪತ್ರಕ್ಕೆ ಸಿಎಂ ಯಡಿಯೂರಪ್ಪ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಹಾಯವಾಣಿ ಮಾರ್ಗಗಳಲ್ಲಿ 100ಕ್ಕೆ ಹೆಚ್ಚಿಸಿ 24 ಗಂಟೆಯೂ ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸಲು ವೃತ್ತಿಪರರಿಗೆ ನೀಡಬೇಕು. ಮುಂದಿನ ದಿನಗಳಲ್ಲಿ ವೆಂಟಿಲೇಟರ್ ಗಳ ಸಂಖ್ಯೆ ಹೆಚ್ಚಳದ ಅಗತ್ಯವಿದ್ದು. ಈ ಕಾರಣಕ್ಕಾಗಿ ಬೆಂಗಳೂರಿನಲ್ಲಿ ಹೆಚ್ಚುವರಿಯಾಗಿ 1 ಸಾವಿರ ಮತ್ತು ರಾಜ್ಯ ಇತರ ಭಾಗಗಳಲ್ಲಿ ಒಂದು ಸಾವಿರ ವೆಂಟಿಲೇಟರ್ ಗಳನ್ನು ಹೆಚ್ಚಿಸಬೇಕು. ಸಣ್ಣಪುಟ್ಟ ಆಸ್ಪತ್ರೆಗಳನ್ನು ಗುರುತಿಸಿ ಹಣದ ಸಹಾಯ ನೀಡಿ ವೆಂಟಿಲೇಟರ್ ಸಂಖ್ಯೆಗಳನ್ನು ಹೆಚ್ಚಿಸಲು ಸರ್ಕಾರವೇ ಪ್ರೋತ್ಸಾಹಿಸಬೇಕು ಎಂದು ಅವರು ಶೋಭಾ ಕರಂದ್ಲಾಜೆ ಸಲಹೆ ನೀಡಿದ್ದಾರೆ.

ರಾಜ್ಯಾದ್ಯಂತ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆ ಪಡೆಯಲು ಸರ್ಕಾರ ಕ್ರಮಕೈಗೊಳ್ಳಬೇಕು. ಇದಕ್ಕಾಗಿ ಕಾರ್ಯಪಡೆ ತಯಾರಿಸಬೇಕು. ಪ್ರತಿ ದಿನ ರೆಮ್ಡೆಸಿವಿರ್ ಮತ್ತು ಆಮ್ಲಜನಕ ಲಭ್ಯತೆ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಪ್ರಕಟಿಸಬೇಕು.  ಕೊವಿಡ್ ನಿಂದ ಮೃತಪಟ್ಟವರನ್ನು ಶವಗಾರದಲ್ಲಿಟ್ಟು ಟೋಕನ್ ವ್ಯವಸ್ಥೆಯ ಮೂಲಕ ಚಿತಾಗರದಲ್ಲಿ ನಿಗದಿತ ಸಮಯಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಎನ್ನುವುದು ಸೇರಿದಂತೆ ಹಲವು ಸಲಹೆಗಳನ್ನು ಶೋಭಾ ಕರಂದ್ಲಾಜೆ  ಸರ್ಕಾರಕ್ಕೆ ನೀಡಿದ್ದಾರೆ.

ಇನ್ನೂ ಶೋಭಾ ಅವರ ಪತ್ರಕ್ಕೆ ಸಿಎಂ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದು. ತಮ್ಮ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಈ ಬಗ್ಗೆ ಸೂಚನೆ ನೀಡಿ, ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ