ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೂ ಧೂಳಿ ಕೊರೊನಾಕ್ಕೆ ಬಲಿ!
01/05/2021
ಶಿರಸಿ: ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೂ ಧೂಳಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದು, ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಅವರು, ಶನಿವಾರ ನಿಧನರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಿವಾಸಿಯಾಗಿರುವ 58 ವರ್ಷ ವಯಸ್ಸಿನ ರಾಜು ಧೂಳಿ, ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಅವರು, ಹುಬ್ಬಳ್ಳಿಯ ಸುಶ್ರುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ರಾಜು ಅವರ ನಿಧನಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.