ಕೊವಿಡ್ ಸಂದರ್ಭದಲ್ಲಿ ಸನ್ನಿ ಲಿಯೋನ್ ಎಂತಹ ಕೆಲಸ ಮಾಡಿದ್ದಾರೆ ನೋಡಿ - Mahanayaka
5:57 AM Thursday 12 - December 2024

ಕೊವಿಡ್ ಸಂದರ್ಭದಲ್ಲಿ ಸನ್ನಿ ಲಿಯೋನ್ ಎಂತಹ ಕೆಲಸ ಮಾಡಿದ್ದಾರೆ ನೋಡಿ

sunny leone
06/05/2021

ನವದೆಹಲಿ:  ಕೊವಿಡ್ ಲಾಕ್ ಡೌನ್ ಸಂದರ್ಭದಲ್ಲಿ  ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಟಿ  ಸನ್ನಿ ಲಿಯೋನ್ ಅವರು, ವಲಸೆ ಕಾರ್ಮಿಕರ ಕಣ್ಣೊರೆಸಲು ಮುಂದಾಗಿದ್ದಾರೆ.

ದೆಹಲಿಯ 10 ಸಾವಿರ ವಲಸಿಗರಿಗೆ ಊಟದ ವ್ಯವಸ್ಥೆ ಮಾಡಲು ಪೇಟಾ ಸಂಸ್ಥೆ ಜೊತೆಗೆ ಕೈ ಜೋಡಿಸಿದ್ದಾರೆ.  ರಾಷ್ಟ್ರ ರಾಜಧಾನಿಯಲ್ಲಿ  ಕೊವಿಡ್ ಪ್ರಕರಣಗಳ ಸಂಖ್ಯೆ ಮಾತ್ರವಲ್ಲದೇ ಸಾವಿನ ಸಂಖ್ಯೆಯೂ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಕೂಡ ಹಸಿವಿನಿಂದ ಒದ್ದಾಡುತ್ತಿದ್ದಾರೆ. ಇವರ ನೆರವಿಗೆ ಸನ್ನಿ ಲಿಯೋನ್ ಮುಂದಾಗಿದ್ದಾರೆ.

ನಾವು ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಆದರೆ ಸಹಾನುಭೂತಿ ಮತ್ತು ಒಗ್ಗಟ್ಟಿನೊಂದಿಗೆ ನಾವು ಮುಂದೆ ಬರಬೇಕು. ಕೊರೊನಾ ಸಮಯದಲ್ಲಿ  ಅಗತ್ಯವಿರುವ ಸಾವಿರಾರು ಜನರಿಗೆ ಪ್ರೋಟೀನ್ ಯುಕ್ತ ಸಸ್ಯಾಹಾರಿ ಊಟ ನೀಡಲು ನನಗೆ ಸಂತೋಷವಾಗಿದೆ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ