ಕರ್ನಾಟಕ ಸಂಪೂರ್ಣ ಲಾಕ್ ಡೌನ್: ಸಿಎಂ ಯಡಿಯೂರಪ್ಪ ಅಧಿಕೃತ ಘೋಷಣೆ
![karnataka lockdown](https://www.mahanayaka.in/wp-content/uploads/2021/05/Yediyurappa.jpg)
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಮೇ 10ರ ಬೆಳಗ್ಗೆ 6ರಿಂದ ಮೇ 24ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಚಟುವಟಿಕೆಗಳಿಗೆ ಅನುಮತಿ ಇಲ್ಲ. ಇದು ತಾತ್ಕಾಲಿಕ ಕ್ರಮವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಆಹಾರ, ಹಾಲು, ತರಕಾರಿ ಮಾರಾಟಕ್ಕೆ ಅನುಕೂಲವಾಗುವಂತೆ ಬೆಳಗ್ಗೆ 6ರಿಂದ 10ರವರೆಗೆ ಅನುಮತಿ ನೀಡಲಾಗಿದೆ. ಹಾಲಿನ ಅಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ. ತಳ್ಳುವ ಗಾಡಿಯಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆಸ್ಪತ್ರೆಗಳಿಗೆ ತೆರಳಲು ಅವಕಾಶ ನೀಡಲಾಗಿದೆ.
ಹೊಟೇಲ್-ಬಾರ್ ನಲ್ಲಿ ಪಾರ್ಸೆಲ್ ವ್ಯವಸ್ಥೆಗೆ ಮಾತ್ರ ಅನುಮತಿ ನೀಡಲಾಗಿದೆ. ನಿಗದಿತ ಕಟ್ಟಡದೊಳಗೆ ಜನರನ್ನು ಬಳಸಿಕೊಂಡು ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ವಿವಾಹದಲ್ಲಿ 50 ಜನರಿಗೆ ಮಾತ್ರವೇ ಭಾಗವಹಿಸಲು ಅನುಮತಿ ನೀಡಲಾಗಿದೆ.