ಬಿಗ್ ಬ್ರೇಕಿಂಗ್ ನ್ಯೂಸ್:  ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಜಾರಿ - Mahanayaka
2:13 AM Wednesday 5 - February 2025

ಬಿಗ್ ಬ್ರೇಕಿಂಗ್ ನ್ಯೂಸ್:  ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಜಾರಿ

yediyurappa
21/05/2021

ಬೆಂಗಳೂರು:  ರಾಜ್ಯದಲ್ಲಿ ಮೇ 24ರ ಬಳಿಕವೂ ಮತ್ತೆ 14 ದಿನಗಳ ಕಾಲ ರಾಜ್ಯಾದ್ಯಂತ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ.

ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಮೇ 24ರಿಂದ  ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.  ಬೆಳಗ್ಗೆ 6ರಿಂದ 9:45ರವರೆಗೆ ಮಾತ್ರವೇ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.  ಆದರೆ, 9:45ರ ಬಳಿಕವೂ ಜನರು ಸುತ್ತಾಡುತ್ತಿರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಇದಕ್ಕೆ ಅವಕಾಶಿ ಇಲ್ಲ. ಪೊಲೀಸರು ಕಠಿಣ ಕ್ರಮಕೈಗೊಳ್ಳಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

ಮಾರ್ಗ ಸೂಚಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಹಿಂದಿನ ಮಾರ್ಗಸೂಚಿಗಳನ್ನೇ ಮುಂದುವರಿಸಲಾಗಿದೆ. ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚನೆ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ