ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಲಾಠಿ ಏಟು: ಬಾಲಕನ ದಾರುಣ ಸಾವು - Mahanayaka
11:40 AM Wednesday 11 - December 2024

ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಲಾಠಿ ಏಟು: ಬಾಲಕನ ದಾರುಣ ಸಾವು

police
22/05/2021

ಲಕ್ನೋ: ಕೊವಿಡ್ ನಿಯಮ ಉಲ್ಲಂಘಿಸಿದ ಎಂದು ಇಬ್ಬರು ಪೊಲೀಸ್ ಸಿಬ್ಬಂದಿ ತರಕಾರಿ ಮಾರಾಟ ಮಾಡುತ್ತಿದ್ದ 17 ವರ್ಷ ವಯಸ್ಸಿನ ಬಾಲಕನನ್ನು ಥಳಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ.

ಉನ್ನಾವೋದ ಬಂಗರ್ಮೌ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ತನ್ನ ಮನೆಯ ಮುಂದೆ ತರಕಾರಿ ಮಾರಾಟ ಮಾಡುತ್ತಿದ್ದ ಬಾಲಕನನ್ನು  ಪೊಲೀಸ್ ಠಾಣೆಗೆ ಕರೆದೊಯ್ದ ಪೊಲೀಸರು, ಮನಬಂದಂತೆ ಥಳಿಸಿ ಚಿತ್ರ ಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ.

ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಬಳಿಕ ಬಾಲಕ ಅಸ್ವಸ್ಥನಾಗಿದ್ದು, ಈ ವೇಳೆ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಇಬ್ಬರು ಕಾನ್ ಸ್ಟೇಬಲ್ ಮತ್ತು ಓರ್ವ ಹೋಂ ಗಾರ್ಡ್ ನ್ನು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ನೀಡಲಾಗಿದೆ.

ಇತ್ತೀಚಿನ ಸುದ್ದಿ