ರಾಜ್ಯದಲ್ಲಿ ಮೊದಲ ಬಾರಿಗೆ 6 ಜನರಲ್ಲಿ ವೈಟ್ ಫಂಗಸ್ ಪತ್ತೆ - Mahanayaka
6:14 PM Thursday 12 - December 2024

ರಾಜ್ಯದಲ್ಲಿ ಮೊದಲ ಬಾರಿಗೆ 6 ಜನರಲ್ಲಿ ವೈಟ್ ಫಂಗಸ್ ಪತ್ತೆ

white fungus
22/05/2021

ರಾಯಚೂರು: ರಾಜ್ಯದಲ್ಲಿ ಮೊದಲ ಬಾರಿಗೆ  6 ಜನರಲ್ಲಿ ವೈಟ್ ಫಂಗಸ್ ಪತ್ತೆಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 6 ಜನರಲ್ಲಿ ಮಾರಕ ವೈಟ್ ಫಂಗಸ್ ಪತ್ತೆಯಾಗಿದೆ ಎಂದು ವರದಿಯಾಗಿದೆ.

ರಾಯಚೂರಿನ ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ವೈರಸ್ ಫಂಗಸ್ ಪತ್ತೆಯಾಗಿದೆ ಎಂದು ವೈದ್ಯ ಡಾ.ಮಂಜುನಾಥ್ ಅವರು ಮಾಹಿತಿ ನೀಡಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.

ವೈಟ್ ಫಂಗಸ್ ಅನ್ನನಾಳಕ್ಕೆ ಹಾನಿ ಮಾಡುತ್ತದೆ. ಆದರೆ 14 ದಿನಗಳ ಕಾಲ ಚಿಕಿತ್ಸೆ ನೀಡಿದರೆ,  ರೋಗದಿಂದ ಗುಣಮುಖರಾಗಬಹುದು. ಈ ಫಂಗಸ್ ರಕ್ತದಲ್ಲಿ ಸೇರಿದರೆ ಮಾತ್ರ ಪ್ರಾಣಕ್ಕೆ ಅಪಾಯವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ