ಸಹೋದರನ ಜೊತೆಗೆ ಇಬ್ಬರು ಸಹೋದರಿಯರ ಆತ್ಮಹತ್ಯೆ
25/05/2021
ಹೈದರಾಬಾದ್: ಸಹೋದರನ ಜೊತೆಗೆ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಪೆನುಕೊಂಡದಲ್ಲಿ ನಡೆದಿದೆ.
ನಿವೃತ್ತ ಬ್ಯಾಂಕ್ ಮ್ಯಾನೇಜರ್ 65 ವರ್ಷ ವಯಸ್ಸಿನ ಅಶ್ವಥಪ್ಪ ತನ್ನ ಇಬ್ಬರು ಸಹೋದರಿಯರೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಮನೆಯಲ್ಲಿ ವಾಸಿಸುತ್ತಿದ್ದ ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವುದು ಕಂಡು ಬಂದಿದೆ.
ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ನೆರೆಹೊರೆಯವರಿಗೂ ತಿಳಿದಿರಲಿಲ್ಲ. ಆದರೆ ಮನೆಯೊಳಗಿನಿಂದ ಕೆಟ್ಟ ವಾಸನೆ ಬರುತ್ತಿದ್ದಂತೆಯೇ ಅನುಮಾನಗೊಂಡು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.